ನವದೆಹಲಿ: ಕೇಂದ್ರ ಗೃಹಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯಗಳನ್ನು ಕೋರಿದ್ದು, “ಭಾರತವನ್ನು ಸಬಲೀಕರಣಗೊಳಿಸಲು ಮತ್ತು ಸುರಕ್ಷಿತವಾಗಿಡಲು ಶಾ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ” ಎಂದಿದ್ದಾರೆ.
“ಸಂಪುಟದ ನನ್ನ ಸಹೋದ್ಯೋಗಿ ಅಮಿತ್ ಶಾ ಅವರಿಗೆ ಜನ್ಮದಿನದ ಶುಭಾಶಯಗಳು. ಅತ್ಯಂತ ಪರಿಶ್ರಮಿ, ಅನುಭವಿ ಮತ್ತು ಸಂಘಟನಾ ಚತುರ ಅವರಾಗಿದ್ದಾರೆ. ಸರ್ಕಾರದಲ್ಲಿ ಅತ್ಯಂತ ಮೌಲ್ಯಯುತ ಪಾತ್ರವನ್ನು ನಿಭಾಯಿಸುವುದರೊಂದಿಗೆ, ಭಾರತವನ್ನು ಸಬಲೀಕರಣಗೊಳಿಸಲು ಮತ್ತು ಭದ್ರಪಡಿಸಲೂ ಮಹತ್ವದ ಕೊಡುಗೆಗಳನ್ನು ನೀಡುತ್ತಿದ್ದಾರೆ. ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಯುತ ಜೀವನವನ್ನು ಕರುಣಿಸಲಿ” ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
कर्मठ, अनुभवी, कुशल संगठनकर्ता एवं मंत्रिमंडल में मेरे सहयोगी अमित शाह जी को जन्मदिन की ढेरों शुभकामनाएं। सरकार में बहुमूल्य भूमिका निभाने के साथ ही वे भारत को सशक्त और सुरक्षित करने में भी महत्वपूर्ण योगदान दे रहे हैं। ईश्वर उन्हें दीर्घायु करे और सदा स्वस्थ रखे। @AmitShah
— Narendra Modi (@narendramodi) October 22, 2019
ಅಕ್ಟೋಬರ್ 22, 1964 ರಂದು ಜನಿಸಿದ ಶಾ ಅವರು 2014 ರಿಂದ ಆಡಳಿತಾರೂಢ ಬಿಜೆಪಿಯನ್ನು ಮುನ್ನಡೆಸುತ್ತಿದ್ದಾರೆ. ಅವರು ಪಕ್ಷದ ಮುಖ್ಯಸ್ಥರಾದ ಅವಧಿಯಿಂದ ಬಿಜೆಪಿ 10 ಕೋಟಿ ನೋಂದಾಯಿತ ಸದಸ್ಯರನ್ನು ಹೊಂದಿರುವ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ.
“ಅಸಾಧಾರಣ ಸಂಘಟಕ, ಕಠಿಣ ಪರಿಶ್ರಮಿ, ನುರಿತ ಕಾರ್ಯತಂತ್ರಜ್ಞ ಮತ್ತು ಸಂಪುಟ ಸಹೋದ್ಯೋಗಿ ಅಮಿತ್ಶಾ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಗೃಹ ಸಚಿವರಾಗಿ ಅವರು ಆಂತರಿಕ ಭದ್ರತೆಯನ್ನು ಬಲಪಡಿಸಲು ಶ್ರಮಿಸುತ್ತಿದ್ದಾರೆ. ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ನಾನು ಬಯಸುತ್ತೇನೆ” ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
जुझारू, परिश्रमी एवं कुशल रणनीतिकार तथा मंत्रिमंडल में साथ काम करने वाले श्री @AmitShah को जन्मदिवस की ढेरों शुभकामनाएँ।
देश के गृहमंत्री के रूप में वे आंतरिक सुरक्षा को और अधिक मज़बूत करने के लिए काम कर रहे हैं। मैं उनके दीर्घायु होने की और अच्छे स्वास्थ्य की कामना करता हूं।
— Rajnath Singh (@rajnathsingh) October 22, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.