ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯ ಬಿಜೆಪಿ ಕಾರ್ಯಕರ್ತರೊಂದಿಗೆ ಅಕ್ಟೋಬರ್ 24ರಂದು ಸಂವಾದವನ್ನು ನಡೆಸಲಿದ್ದಾರೆ. ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಹನ ನಡೆಯಲಿದೆ.
“ನಾನು ಅಕ್ಟೋಬರ್ 24 ರಂದು ನನ್ನ ಸಂಸದೀಯ ಕ್ಷೇತ್ರ ವಾರಣಾಸಿಯ ಕಾರ್ಯಕರ್ತರೊಂದಿಗೆ ಸಂವಹನ ನಡೆಸುತ್ತೇನೆ. ಈ ಸಂವಾದದಲ್ಲಿ ಭಾಗಿಯಾಗುವಂತೆ ನಾನು ಎಲ್ಲಾ ಕಾರ್ಯಕರ್ತರನ್ನು ಆಹ್ವಾನಿಸುತ್ತೇನೆ. ನಿಮ್ಮ ಸಲಹೆ ಮತ್ತು ಪ್ರಶ್ನೆಗಳನ್ನು ನಮೋ ಆ್ಯಪ್ನಲ್ಲಿ ನೀವು ಹಂಚಿಕೊಳ್ಳಬಹುದು” ಎಂದು ಮೋದಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ನಮೋ ಅಪ್ಲಿಕೇಶನ್ ಪ್ರಧಾನ ಮಂತ್ರಿಯ ಮೊಬೈಲ್ ಅಪ್ಲಿಕೇಶನ್ ಆಗಿದ್ದು, ಅವರ ಹೆಸರಿನ ಮೊದಲ ಎರಡು ಅಕ್ಷರಗಳನ್ನು ಜೋಡಿಸಿ ಈ ಆ್ಯಪ್ಗೆ ಹೆಸರಿಡಲಾಗಿದೆ.
ಈ ವರ್ಷದ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಪ್ರಧಾನಿ ಮೋದಿ ಎರಡನೇ ಬಾರಿಗೆ ವಾರಣಾಸಿಯ ಸಂಸದರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿಯವರು ನಿರಂತರವಾಗಿ ಸಂವಾದಗಳನ್ನು ನಡೆಸುವ ಮೂಲಕ ಅವರ ಮನೋಸ್ಥೈರ್ಯವನ್ನು ಇಮ್ಮಡಿಗೊಳಿಸುವ ಕಾರ್ಯವನ್ನು ಮಾಡುತ್ತಾರೆ. ಕಾರ್ಯಕರ್ತರಿಗೆ ಪಕ್ಷವನ್ನು ಕಟ್ಟಲು ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಾರೆ.
24 अक्टूबर को मैं अपने संसदीय क्षेत्र वाराणसी के कार्यकर्ताओं से संवाद करूंगा। इसमें शामिल होने के लिए मैं अपने सभी कार्यकर्ताओं को आमंत्रित करता हूं। आपके पास कोई सुझाव या प्रश्न हो तो उसे नमो ऐप पर साझा कर सकते हैं। pic.twitter.com/eacTkPJK8a
— Narendra Modi (@narendramodi) October 22, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.