ನವದೆಹಲಿ: 2019 ರ ಅರ್ಥಶಾಸ್ತ್ರ ನೊಬೆಲ್ ವಿಜೇತ ಅಭಿಜಿತ್ ಬ್ಯಾನರ್ಜಿ ಅವರು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭೇಟಿಯ ಬಗ್ಗೆ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದು, “ಭಾರತವು ಅವರ ಸಾಧನೆಗಳ ಬಗ್ಗೆ ಹೆಮ್ಮೆಪಡುತ್ತದೆ” ಎಂದಿದ್ದಾರೆ.
“ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ಅತ್ಯುತ್ತಮ ಭೇಟಿ ನಡೆಯಿತು. ಮಾನವ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಸ್ಪಷ್ಟವಾಗಿ ಗೋಚರಿಸುತ್ತದೆ. ನಾವು ವಿವಿಧ ವಿಷಯಗಳ ಬಗ್ಗೆ ಆರೋಗ್ಯಕರ ಮತ್ತು ವ್ಯಾಪಕವಾದ ಸಂವಾದವನ್ನು ನಡೆಸಿದ್ದೇವೆ. ಅವರ ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಅವರ ಮುಂದಿನ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಸುತ್ತೇವೆ” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Excellent meeting with Nobel Laureate Abhijit Banerjee. His passion towards human empowerment is clearly visible. We had a healthy and extensive interaction on various subjects. India is proud of his accomplishments. Wishing him the very best for his future endeavours. pic.twitter.com/SQFTYgXyBX
— Narendra Modi (@narendramodi) October 22, 2019
ಇದಕ್ಕೂ ಮುನ್ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಅಭಿಜಿತ್ ಅವರು, “ನನ್ನ ಆರ್ಥಿಕ ಚಿಂತನೆಯಲ್ಲಿ ನಾನು ಪಕ್ಷಪಾತಿಯಲ್ಲ. ನಾವು ಹಲವು ರಾಜ್ಯ ಸರ್ಕಾರಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ, ಅವುಗಳಲ್ಲಿ ಹಲವು ಬಿಜೆಪಿ ಸರ್ಕಾರಗಳೂ ಆಗಿವೆ. ನರೇಂದ್ರ ಮೋದಿಯವರು ಗುಜರಾತ್ ಸಿಎಂ ಆಗಿದ್ದಾಗ ನಾವು ಗುಜರಾತ್ ಮಾಲಿನ್ಯ (ನಿಯಂತ್ರಣ) ಮಂಡಳಿಯೊಂದಿಗೆ ಕೆಲಸ ಮಾಡಿದ್ದೇನೆ, ನಿಜಕ್ಕೂ ಅದೊಂದು ಅತ್ಯುತ್ತಮ ಅನುಭವವಾಗಿತ್ತು” ಎಂದಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.