ಅಹ್ಮದಾಬಾದ್: ವಿಶ್ವದ ಅತಿ ಎತ್ತರದ ಪ್ರತಿಮೆ, ‘ಸ್ಟ್ಯಾಚು ಆಫ್ ಯೂನಿಟಿ’ ತನ್ನ ಮೊದಲ ವಾರ್ಷಿಕೋತ್ಸವವನ್ನು ಅಕ್ಟೋಬರ್ 31 ರಂದು ಆಚರಿಸಿಕೊಳ್ಳುತ್ತಿದೆ. ಈ ಪ್ರತಿಮೆ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿ ಹೊರಹೊಮ್ಮಿದ್ದು, ಭಾರತದ ಹೆಮ್ಮೆಯ ಪ್ರತೀಕವಾಗಿದೆ.
ಭಾರತದ ಮೊದಲ ಕೇಂದ್ರ ಗೃಹ ಸಚಿವ ಮತ್ತು ಉಪ ಪ್ರಧಾನಿಯಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 143 ನೇ ಜನ್ಮ ವಾರ್ಷಿಕೋತ್ಸವದಂದು ಈ ಪ್ರತಿಮೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಾಯಿತು. ಇದನ್ನು ಅಕ್ಟೋಬರ್ 31, 2018 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಗುಜರಾತಿನ ನರ್ಮದಾ ನದಿ ತಟದಲ್ಲಿ ಈ ಪ್ರತಿಮೆ ಇದೆ.
ಗುಜರಾತ್ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಯೊಬ್ಬರು ಹಂಚಿಕೊಂಡ ವಿವರಗಳ ಪ್ರಕಾರ, ಏಕತಾ ಪ್ರತಿಮೆಯು 26 ಲಕ್ಷ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸಿದೆ. ಟಿಕೆಟ್ ಮಾರಾಟದ ಮೂಲಕ 57 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಲಾಗಿದೆ. ಈ ಅಂಕಿಅಂಶವನ್ನು ನವೆಂಬರ್ 1, 2018 ರಿಂದ ಸೆಪ್ಟೆಂಬರ್ 12, 2019 ರ ಅವಧಿಯಲ್ಲಿ ಸಂಗ್ರಹಿಸಲಾಗಿದೆ.
ಕಳೆದ ಒಂದು ವರ್ಷದಲ್ಲಿ 12.35 ಲಕ್ಷ ಅನಿವಾಸಿ ಭಾರತೀಯರು ಮತ್ತು ವಿದೇಶಿ ಪ್ರವಾಸಿಗರು ಏಕತಾ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದಾರೆ.
182 ಮೀಟರ್ ಎತ್ತರದ ಪ್ರತಿಮೆಯು ನರ್ಮದಾ ನದಿಯ ಸಾಧು-ಬೆಟ್ ದ್ವೀಪದಲ್ಲಿದೆ, ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ಸರ್ದಾರ್ ಸರೋವರ್ ಅಣೆಕಟ್ಟಿನಿಂದ ದಕ್ಷಿಣಕ್ಕೆ ಸುಮಾರು 3.5 ಕಿ.ಮೀ ದೂರದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.