ಗುವಾಹಟಿ: ಜನಸಂಖ್ಯಾ ನಿಯಂತ್ರಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿದರೆ ಸರ್ಕಾರಿ ಕೆಲಸವನ್ನು ನೀಡಲಾಗುವುದಿಲ್ಲ ಎಂದು ಘೋಷಿಸಲಾಗಿದೆ. 2021ಕ್ಕೆ ಅನುಷ್ಠಾನಕ್ಕೆ ಬರುವಂತೆ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.
2021ರಿಂದ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ಸರ್ಕಾರಿ ಕೆಲಸಕ್ಕೆ ಅನರ್ಹ ಎಂದು ಅಲ್ಲಿ ಘೋಷಿಸಲಾಗಿದೆ.
ಮುಖ್ಯಮಂತ್ರಿ ಸರ್ಬಾನಂದ್ ಸೋನಾವಾಲ್ ಅವರ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
2017ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗೀಕಾರಗೊಂಡಿತ್ತು. ಅದರ ಅನ್ವಯ ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವವರು ಕೇವಲ ಎರಡು ಮಕ್ಕಳನ್ನು ಹೊಂದಿರುವುದು ಕಡ್ಡಾಯವಾಗಿತ್ತು.
2021ರಿಂದ ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೂ ಅನ್ವಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.