ನವದೆಹಲಿ: ಕಾಂಗ್ರೆಸ್ ಮುಖಂಡ, ಕರ್ನಾಟಕದ ಮಾಜಿ ರಾಜ್ಯಸಭಾ ಸಂಸದ ಕೆಸಿ ರಾಮಮೂರ್ತಿ ಅವರು ಇಂದು ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಗಣ್ಯರ ಸಮ್ಮುಖದಲ್ಲಿ ಬಿಜೆಪಿ ಪಕ್ಷವನ್ನು ಸರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, “ಬಿಜೆಪಿಗೆ ಸಾಕಷ್ಟು ಜನರು ಸೇರ್ಪಡೆಗೊಳ್ಳುತ್ತಿದ್ದಾರೆ. ಪ್ರಸ್ತುತ ಕೆಸಿ ರಾಮಮೂರ್ತಿ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ರಾಜ್ಯಸಭಾ ಸ್ಥಾನಕ್ಕೆ ಅವರು ರಾಜೀನಾಮೆಯನ್ನು ನೀಡಿದ್ದಾರೆ” ಎಂದಿದ್ದಾರೆ.
ಈ ವೇಳೆ ಮಾತನಾಡಿದ ರಾಮಮೂರ್ತಿ ಅವರು, ಕಾಂಗ್ರೆಸ್ ಪಕ್ಷದಲ್ಲಿದ್ದ ಸಂದರ್ಭದಲ್ಲಿ ನಾನು ನನ್ನ ಒಳ ಮನಸ್ಸನ್ನು ಸಾಯುಸುತ್ತಿದ್ದೆ. ಇದಕ್ಕೆ ಸರ್ವಾಧಿಕಾರವೇ ಕಾರಣವಾಗಿತ್ತು, ವ್ಯಕ್ತಿಗಳ ಅಭಿಪ್ರಾಯಕ್ಕೆ ಅಲ್ಲಿ ಬೆಲೆ ಇರಲಿಲ್ಲ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತವನ್ನು ಕೊಂಡಾಡಿದ ಅವರು, ದೇಶದ ಹಿತಾಸಕ್ತಿಗೆ ಅನುಗುಣವಾಗಿ ದೇಶದ ಪ್ರಗತಿಗಾಗಿ ಅವರು ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.