ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 9 ರಂದು ಕರ್ತಾರ್ಪುರ್ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದು, ಅದೇ ದಿನ ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ಕರ್ತಾರ್ಪುರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಮೊದಲ ಯಾತ್ರಾರ್ಥಿಗಳನ್ನು ಅವರು ಕಳುಹಿಸಿಕೊಡಲಿದ್ದಾರೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಸಿಖ್ ನಿಯೋಗದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೂ ಇರಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇವರುಗಳು ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಿ ಅದೇ ದಿನ ಹಿಂದಿರುಗಲಿದ್ದಾರೆ ಎಂದಿದ್ದಾರೆ.
ಪಾಕಿಸ್ಥಾನದೊಂದಿಗಿನ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಭಾರತ ಘೋಷಿಸಿದ ಒಂದು ದಿನದ ನಂತರ ಈ ಪ್ರಕಟಣೆ ಹೊರಬಿದ್ದಿದೆ.
ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದ ನರೋವಾಲ್ ಜಿಲ್ಲೆಯ ಕರ್ತಾರ್ಪುರ್ ಸಾಹಿಬ್ ಗುರುದ್ವಾರವು ಗಡಿಯಿಂದ 4.5 ಕಿ.ಮೀ ದೂರದಲ್ಲಿ ಡೇರಾ ಬಾಬಾ ನಾನಕ್ ಬಳಿ ಇದೆ. ಈ ಗುರುದ್ವಾರಕ್ಕೆ ವರ್ಷಪೂರ್ತಿ ಭಾರತೀಯ ಯಾತ್ರಿಕರಿಗೆ ಕಾರಿಡಾರ್ ಮೂಲಕ ಪ್ರವೇಶಿಸಬಹುದಾಗಿದೆ.
ಪ್ರತಿದಿನ 5,000 ಯಾತ್ರಾರ್ಥಿಗಳಿಗೆ ಪವಿತ್ರ ದೇಗುಲಕ್ಕೆ ಭೇಟಿ ನೀಡಲು ಅವಕಾಶ ನೀಡಲಾಗುತ್ತಿದೆ. ಭಾರತವು ಭೇಟಿ ನೀಡುವ 10 ದಿನಗಳ ಮೊದಲು ಯಾತ್ರಾರ್ಥಿಗಳ ಪಟ್ಟಿಯನ್ನು ಹಂಚಿಕೊಳ್ಳಲಿದೆ. ಪಾಕಿಸ್ಥಾನವು ಪಟ್ಟಿಯನ್ನು ಪರಿಶೀಲಿಸಲಿದೆ ಮತ್ತು ಭೇಟಿಗೂ ನಾಲ್ಕು ದಿನಗಳ ಮೊದಲು ಅದನ್ನು ಅಂತಿಮಗೊಳಿಸುತ್ತದೆ.
ಸಿಖ್ ಧರ್ಮದ ಸಂಸ್ಥಾಪಕ ಗುರುನಾನಕ್ ದೇವ್ ಅವರ 550 ನೇ ಜನ್ಮದಿನಾಚರಣೆಯನ್ನು ಸಂಭ್ರಮ ಪ್ರಾರಂಭವಾಗುವ ಒಂದು ವಾರದ ಮೊದಲು, ಭಾರತೀಯ ಕಡೆಯಿಂದ 4.2 ಕಿ.ಮೀ ಉದ್ದದ ಕಾರಿಡಾರ್ ಅಕ್ಟೋಬರ್ 31 ರೊಳಗೆ ಪೂರ್ಣಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.