ಮುಂಬಯಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಬುಧವಾರ ಮುಂಬಯಿನಲ್ಲಿ ಬಿಸಿಸಿಐ ಮುಖ್ಯಸ್ಥರಾಗಿ ಪದಗ್ರಹಣ ಮಾಡಿದ್ದಾರೆ. ಇತ್ತೀಚಿಗೆ ನಡೆದ ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗಂಗೂಲಿ ಅವರನ್ನು ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿತ್ತು.
ಬಿಸಿಸಿಐ ಮುಖ್ಯಸ್ಥ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಗಂಗೂಲಿ ಒಬ್ಬರೇ, ಅವರನ್ನು ಅವಿರೋಧವಾಗಿ ನೇಮಕ ಮಾಡಲಾಯಿತು. ಮುಂದಿನ 11 ತಿಂಗಳುಗಳ ಕಾಲ ಅವರು ಬಿಸಿಸಿಐ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಗಂಗೂಲಿ ಅವರು ಮುಖ್ಯಸ್ಥರಾಗಿ ನೇಮಕವಾಗಿರುವ ಹಿನ್ನಲೆಯಲ್ಲಿ, ಬಿಸಿಸಿಐನ ಆಡಳಿತವನ್ನು ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿ(CoA)ಯ 33 ತಿಂಗಳ ಆಳ್ವಿಕೆ ಕೂಡ ಇಂದಿಗೆ ಅಂತ್ಯವಾಗಿದೆ.
ನ್ಯಾಯಮೂರ್ತಿ ಎಸ್ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ನ ನ್ಯಾಯಪೀಠವು ಆಡಳಿತಾಧಿಕಾರಿಗಳ ಸಮಿತಿಯ ಯಾವುದೇ ಅನುಮತಿ ಪಡೆಯದೆ ಯಾವುದೇ ಕ್ರಮಗಳನ್ನು ಪ್ರಾರಂಭಿಸಬಾರದು ಎಂದು ಬಿಸಿಸಿಐಗೆ ನಿರ್ದೇಶನವನ್ನು ನೀಡಿತ್ತು. ಬಿಸಿಸಿಐ ಚುನಾವಣೆ ಮುಗಿದ ನಂತರ, ಆಡಳಿತಾಧಿಕಾರಿಗಳ ಸಮಿತಿಯು ಹೊಸ ಸಂಸ್ಥೆಗೆ ಅಧಿಕಾರವನ್ನು ಹಸ್ತಾಂತರಿಸುತ್ತದೆ ಎಂದಿತ್ತು. ಅದೇ ರೀತಿ ಗಂಗೂಲಿ ಅವರಿಗೆ ಅಧಿಕಾರವನ್ನು ಹಸ್ತಾಂತರ ಮಾಡಲಾಗಿದೆ.
ಅರುಣ್ ಧುಮಾಲ್ ಅವರು ಬಿಸಿಸಿಐ ಖಜಾಂಚಿಯಾಗಿ ಮತ್ತು ಜಯೇಶ್ ಜಾರ್ಜ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಈ ಬಾರಿ ಬಿಸಿಸಿಐಗೆ ಚುನಾವಣೆ ನಡೆದಿಲ್ಲ.
It’s official – @SGanguly99 formally elected as the President of BCCI pic.twitter.com/Ln1VkCTyIW
— BCCI (@BCCI) October 23, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.