ನವದೆಹಲಿ: ದೆಹಲಿಯ ಆಡಳಿತರೂಢ ಎಎಪಿ ಪಕ್ಷದ ಶಾಸಕ ಮನೋಜ್ ಕುಮಾರ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಫೋರ್ಜರಿ ಮಾಡಿದ ಮತ್ತು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಕೊಂಡ್ಲಿಯ ಶಾಸಕನಾಗಿರುವ ಮನೋಜ್ ಅವರ ಮೇಲೆ ಫೋರ್ಜರಿ ದಾಖಲೆಗಳ ಮೂಲಕ ಭೂಮಿ ಖರೀದಿಸಿದ ಆರೋಪವಿದೆ, ಇದೊಂದು ಹಳೆ ಪ್ರಕರಣವಾಗಿದ್ದು ಇಂದು ಅವರನ್ನು ಬಂಧಿಸಿದ್ದೇವೆ ಎಂದು ದೆಹಲಿ ಪೊಲೀಸ್ ಆಯುಕ್ತ ಬಿಎಸ್ ಬಸ್ಸಿ ತಿಳಿಸಿದ್ದಾರೆ.
ಇದೀಗ ಅವರನ್ನು ಅಶೋಕ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ.
ಈಗಾಗಲೇ ದೆಹಲಿ ಸಚಿವರಾಗಿದ್ದ ಎಎಪಿ ನಾಯ ಜಿತೇಂದ್ರ ಸಿಂಗ್ ತೋಮರ್ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇರೆಗೆ ಜೈಲಿನಲ್ಲಿದ್ದಾರೆ. ಈ ನಡುವೆಯೇ ಮನೋಜ್ ಬಂಧೀತರಾಗಿದ್ದು ಎಎಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.