ಶ್ರೀನಗರ: ಕೇಂದ್ರ ಸರ್ಕಾರವು ಜಮ್ಮು ಕಾಶ್ಮೀರದಲ್ಲಿರುವ ಭಾರತದ ಅತೀ ಉದ್ದದ ಸುರಂಗ ಮಾರ್ಗ ಚೆನಾನಿ-ನಶ್ರೀ ಸುರಂಗಕ್ಕೆ ಭಾರತೀಯ ಜನ ಸಂಘದ ಸಂಸ್ಥಾಪಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಹೆಸರನ್ನು ಗುರುವಾರ ಮರುನಾಮಕರಣ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ 9.2 ಕಿ.ಮೀ ಉದ್ದದ ಸುರಂಗವು ದೇಶದ ಅತಿ ಉದ್ದದ ಸುರಂಗವಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ,”ಒಂದು ರಾಷ್ಟ್ರ, ಒಂದು ಧ್ವಜಕ್ಕಾಗಿ ಮುಖರ್ಜಿ ಅವರು ಮಾಡಿದ ಹೋರಾಟವು ರಾಷ್ಟ್ರೀಯ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದೇ ಕಾರಣಕ್ಕಾಗಿ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಡಾ.ಮುಖರ್ಜಿ ಅವರ ಗೌರವಾರ್ಥವಾಗಿ ಸುರಂಗಕ್ಕೆ ಮರುನಾಮಕರಣ ಮಾಡಿತು” ಎಂದಿದ್ದಾರೆ.
ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು 2017 ರಲ್ಲಿ ಉದ್ಘಾಟಿಸಿದರು. ಪಟ್ನಿಟಾಪ್ ಸುರಂಗ ಎಂದೂ ಕರೆಯಲ್ಪಡುವ ದ್ವಿ-ದಿಕ್ಕಿನ ಸುರಂಗವು ಜಮ್ಮು ಮತ್ತು ಶ್ರೀನಗರ ನಡುವಿನ ಅಂತರವನ್ನು 30 ಕಿ.ಮೀ ಕಡಿಮೆ ಮಾಡುತ್ತದೆ.
2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಪ್ರಧಾನಿ ಮೋದಿ ಸರ್ಕಾರವು ಕಾಶ್ಮೀರದ ಅಭಿವೃದ್ಧಿಗೆ 7,000 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ ಎಂದು ಗಡ್ಕರಿ ಹೇಳಿದ್ದಾರೆ. ಅತ್ಯಾಧುನಿಕ ಚೆನಾನಿ-ನಶ್ರೀ ಸುರಂಗ ನಿರ್ಮಾಣಕ್ಕಾಗಿ ಸುಮಾರು 2,600 ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಕಾಶ್ಮೀರದಲ್ಲಿ ರಸ್ತೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವುದರಿಂದ ಇಲ್ಲಿನ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗುತ್ತದೆ” ಎಂದು ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬಡತನ ಮತ್ತು ಅಪೌಷ್ಟಿಕತೆ ಎರಡು ಪ್ರಮುಖ ಸಮಸ್ಯೆಗಳಾಗಿದ್ದು, ಈ ನಿಟ್ಟಿನಲ್ಲಿ ಕೇಂದ್ರವು ಹೊಸ ಎಂಎಸ್ಎಂಇ ಪ್ಯಾಕೇಜ್ ತಂದಿದೆ, ಜಮ್ಮು ಮತ್ತು ಕಾಶ್ಮೀರದ ಯುವಕರಿಗೆ ಉದ್ಯೋಗ ನೀಡುವ ಉದ್ದೇಶ ಇದರ ಹಿಂದಿದೆ ಎಂದು ಗಡ್ಕರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.