ಮುಂಬಯಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ಬಿಜೆಪಿ-ಶಿವಸೇನಾ ಮೈತ್ರಿಯು ಸ್ಪಷ್ಟಬಹುಮತವನ್ನು ಪಡೆದುಕೊಂಡಿದೆ.
288 ವಿಧಾನಸಭಾ ಚುನಾವಣೆ ಸ್ಥಾನಗಳ ಪೈಕಿ ಬಹುಮತ ಪಡೆಯಲು ಬೇಕಾಗಿರುವುದು 145 ಸ್ಥಾನಗಳು. ಬಿಜೆಪಿಯು 105 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದು, ಮೈತ್ರಿ ಪಕ್ಷ ಶಿವಸೇನೆಯು 56 ಸ್ಥಾನಗಳನ್ನು ಗೆದ್ದುಕೊಂಡಿದೆ. ಶೀಘ್ರದಲ್ಲೇ ಈ ಮೈತ್ರಿ ಪಕ್ಷಗಳು ಸರ್ಕಾರವನ್ನು ರಚನೆ ಮಾಡಲಿದೆ.
ಕಾಂಗ್ರೆಸ್ ಪಕ್ಷ 44 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಎನ್ಸಿಪಿ 54 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೈತ್ರಿಪಕ್ಷಗಳು ಈ ಬಾರಿಯೂ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸ್ಥಾನದಲ್ಲಿ ಕೂರಲಿವೆ.
ಕಳೆದ ಐದು ವರ್ಷಗಳಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿ ಆಡಳಿತವನ್ನು ನಡೆಸಿತ್ತು. ಇದೀಗ ಮತ್ತೊಂದು ಅವಧಿಗೆ ಮೈತ್ರಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ. ದೇವೇಂದ್ರ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.