ಚಂಡೀಗಢ: ಹರಿಯಾಣದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ. ಆರು ಮಂದಿ ಪಕ್ಷೇತರ ಶಾಸಕರುಗಳು ಬಿಜೆಪಿಗೆ ಬೇಷರತ್ ಬೆಂಬಲವನ್ನು ನೀಡಿದ್ದಾರೆ. ಹೀಗಾಗಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನು ಏರಲಿದೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆ ಮಾಡಲು ಅದಕ್ಕೆ 6 ಸ್ಥಾನಗಳ ಕೊರತೆ ಉಂಟಾಗಿದೆ. ಇಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, 40 ಸ್ಥಾನಗಳಲ್ಲಿ ಬಿಜೆಪಿ ಜಯ ಗಳಿಸಿದೆ. ಬಹುಮತಕ್ಕೆ 46 ಸ್ಥಾನಗಳ ಅವಶ್ಯಕತೆ ಇದೆ.
ಅತಂತ್ರ ಫಲಿತಾಂಶ ಹೊರ ಬೀಳುತ್ತಿದ್ದಂತೆ ಹರಿಯಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸರಣಿ ಸಭೆಗಳನ್ನು ನಡೆಸಿದ ಬಿಜೆಪಿ ಪಕ್ಷೇತರರನ್ನು ಸೆಳೆಯುವಲ್ಲಿ ಬಹುತೇಕ ಯಶಸ್ವಿಯಾಗಿದೆ.
ಹರಿಯಾಣ ಲೋಕಹಿತ ಪಕ್ಷದ ಗೋಪಾಲ್ ಕಾಂಡ ಅವರು ಇಂದು, ಬಿಜೆಪಿಗೆ ಆರು ಪಕ್ಷೇತರ ಶಾಸಕರು ಬೇಷರತ್ ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ.
ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ 31 ಸ್ಥಾನಗಳನ್ನು, ಜೆಜೆಪಿ 10 ಸ್ಥಾನಗಳನ್ನು ಗೆದ್ದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.