ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರ ದೀಪಾವಳಿ ಆಚರಿಸಿಕೊಳ್ಳುತ್ತಿರುವ ತನ್ನ ದೇಶದ ನಿವಾಸಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ಅಮೆರಿಕಾದ್ಯಂತ ದೀಪಾವಳಿ ಹಬ್ಬವನ್ನು ಆಚರಿಸುತ್ತಿರುವುದು ಅದರ ಪ್ರಮುಖ ಮೌಲ್ಯಗಳಲ್ಲಿ ಒಂದಾದ ಧಾರ್ಮಿಕ ಸ್ವಾತಂತ್ರ್ಯದ ಪ್ರಮುಖ ಜ್ಞಾಪನೆಯಾಗಿದೆ ಎಂದು ಹೇಳಿದ್ದಾರೆ.
“ದೀಪಾವಳಿ ಪ್ರಾರಂಭವಾಗುತ್ತಿದ್ದಂತೆ, ಮೆಲನಿಯಾ ಮತ್ತು ನಾನು ದೀಪಗಳ ಹಬ್ಬವನ್ನು ಆಚರಿಸುವವರಿಗೆ ಶುಭ ಮತ್ತು ಸಂತೋಷವನ್ನು ಹಾರೈಸುತ್ತೇವೆ” ಎಂದು ಟ್ರಂಪ್ ಹೇಳಿರುವುದಾಗಿ ಶ್ವೇತಭವನದ ಹೇಳಿಕೆ ತಿಳಿಸಿದೆ.
“ಅಮೆರಿಕಾ ಮತ್ತು ಪ್ರಪಂಚದಾದ್ಯಂತದ ಹಿಂದೂಗಳು, ಜೈನರು, ಸಿಖ್ಖರು ಮತ್ತು ಬೌದ್ಧರು ದೀಪಾವಳಿ ಹಬ್ಬವನ್ನು ಆಚರಿಸುತ್ತಾರೆ. ಈ ಪವಿತ್ರ ಹಬ್ಬವು ಕತ್ತಲೆಯ ವಿರುದ್ಧ ಬೆಳಕಿನ ವಿಜಯ, ದುಷ್ಟರ ವಿರುದ್ಧ ಒಳ್ಳೆಯದರ ವಿಜಯ ಮತ್ತು ಅಜ್ಞಾನದ ವಿರುದ್ಧ ಜ್ಞಾನದ ವಿಜಯದ ಸಂಕೇತವಾಗಿದೆ. ಈ ಪವಿತ್ರ ಸಂದರ್ಭದಲ್ಲಿ ಜನರು ಪ್ರಾರ್ಥನೆಯನ್ನು ಮಾಡುತ್ತಾರೆ, ದೀಪಗಳನ್ನು ಹೊತ್ತಿಸುತ್ತಾರೆ, ಸಾಂಪ್ರದಾಯಿಕ ವಿಧಿವಿಧಾನಗಳನ್ನು ಆಚರಿಸುತ್ತಾರೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಮಯ ಕಳೆಯುತ್ತಾರೆ “ಎಂದು ಟ್ರಂಪ್ ಹೇಳಿದ್ದಾರೆ.
ಟ್ರಂಪ್ ಅವರು ತಮ್ಮ ಕಛೇರಿಯಲ್ಲಿ ಭಾರತೀಯ ಅಮೆರಿಕನ್ ಸಮುದಾಯದೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಅಮೆರಿಕಾದ ಮೂಲ ಧ್ಯೇಯವಾದ ಧಾರ್ಮಿಕ ಸ್ವಾತಂತ್ರ್ಯದ ಆಶಯದಂತೆ ದೀಪಾವಳಿಯನ್ನು ಆಚರಿಸಲಾಗುತ್ತಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.