ಲಕ್ನೋ: ಯೋಗಿ ಆದಿತ್ಯನಾಥ ನೇತೃತ್ವದ ಉತ್ತರಪ್ರದೇಶ ಸರ್ಕಾರವು ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿದೆ. ಇಂದು ಅಯೋಧ್ಯಾದಲ್ಲಿ ದೀಪೋತ್ಸವ ಕಾರ್ಯಕ್ರಮ ಜರುಗುತ್ತಿದ್ದು, 5.51 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತಿದೆ. ಇದು ಗಿನ್ನಿಸ್ ದಾಖಲೆಯ ಪುಟಕ್ಕೆ ಸೇರುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಸರ್ಕಾರವೂ ರೂ.226 ಕೋಟಿಗಳ ಯೋಜನೆಯನ್ನೂ ಘೋಷಣೆ ಮಾಡಲಿದೆ.
ಉತ್ತರಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಫಿಜಿ ಗಣರಾಜ್ಯದ ಉಪ ಸ್ಪೀಕರ್ ವೀಣಾ ಭಟ್ನಾಗರ್ ಮತ್ತು ರಾಜ್ಯದ ಇತರ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರದ ವಕ್ತಾರರು, “ಅಯೋಧ್ಯೆಯಲ್ಲಿ ಶನಿವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಭಗವಾನ್ ಶ್ರೀ ರಾಮನ ಟ್ಯಾಬ್ಲೋ ಮೆರವಣಿಗೆಯನ್ನು ಆಯೋಜಿಸಲಾಗುತ್ತಿದೆ. ಈ ಮೆರವಣಿಗೆ ಸಾಕೇತ್ ಕಾಲೇಜಿನಿಂದ ಪ್ರಾರಂಭವಾಗಿ ರಾಮ್ಕಥಾ ಉದ್ಯಾನವನದಲ್ಲಿ ಕೊನೆಗೊಳ್ಳಲಿದೆ, ಇದರಲ್ಲಿ ವಿವಿಧ ದೇಶಗಳ ಕಲಾವಿದರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:45 ರಿಂದ ಸಂಜೆ 4 ರವರೆಗೆ ಮೆರವಣಿಗೆಯನ್ನು ಮುಖ್ಯಮಂತ್ರಿ ಅವಲೋಕಿಸಲಿದ್ದಾರೆ” ಎಂದಿದ್ದಾರೆ.
“ಇದಾದ ಬಳಿಕ ಸಂಜೆ 4.15 ರಿಂದ 4.40ರ ನಡುವೆ ಶ್ರೀರಾಮ ಮತ್ತು ಸೀತಾಮಾತೆಯ ಸಾಂಕೇತಿಕ ಆಗಮನ ಕಾರ್ಯ ನಡೆಯಲಿದೆ. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಶ್ರೀರಾಮನ ಅವತಾರಗಳು ಪ್ರದರ್ಶನಗಳು ನಡೆಯಲಿದೆ” ಎಂದಿದ್ದಾರೆ.
ಸಂಜೆ 6 ಗಂಟೆಗೆ ವಿವಿಧ ಯೋಜನೆಗಳ ಶಂಕುಸ್ಥಾಪನೆ ಕಾರ್ಯಕ್ರಮಗಳು ಜರುಗಲಿದೆ, ಗಣ್ಯರು ಭಾಷಣವನ್ನು ಮಾಡಲಿದ್ದಾರೆ ಎಂದಿದ್ದಾರೆ.
7 ದೇಶಗಳ ರಾಮಲೀಲಾಗಳು ಈ ವರ್ಷದ ಪ್ರಮುಖ ಆಕರ್ಷಣೆಯಾಗಲಿದೆ. ಶ್ರೀರಾಮನ ಬಗೆಗಿನ ಟ್ಯಾಬ್ಲೋಗಳೂ ವಿವಿಧ ಕಾರ್ಯಕ್ರಮಗಳನ್ನು ಒಳಗೊಳ್ಳಲಿದೆ. 2,500 ಮಕ್ಕಳು ಶ್ರೀರಾಮನ ಜೀವನಾಧಾರಿತ ಕಾರ್ಯಕ್ರಮ ನಡೆಸಿಕೊಡಲು ಸಜ್ಜಾಗಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.