ಚಂಡೀಗಢ: ಹರಿಯಾಣ ಮುಖ್ಯಮಂತ್ರಿಯಾಗಿ ಬಿಜೆಪಿಯ ಮನೋಹರ್ ಲಾಲ್ ಖಟ್ಟರ್ ಅವರು ಭಾನುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯ ಬಳಿಕ ಈ ನಿರ್ಧಾರ ಹೊರಬಿದ್ದಿದೆ.
ಮನೋಹರ್ ಲಾಲ್ ಖಟ್ಟರ್ ಅವರು ಎರಡನೇಯ ಬಾರಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ನೇಮಕವಾಗುತ್ತಿದ್ದಾರೆ.
ಇಂದು ಮನೋಹರ್ ಲಾಲ್ ಖಟ್ಟರ್ ಅವರನ್ನು ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, “ನಾವು ರಾಜ್ಯಪಾಲ ಸತ್ಯದೇವ್ ನರೈನ್ ಆರ್ಯ ಅವರನ್ನು ಭೇಟಿಯಾಗಿ, ಸರ್ಕಾರ ರಚನೆಗೆ ನಮ್ಮನ್ನು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ” ಎಂದಿದ್ದಾರೆ.
ಶನಿವಾರ ಜೆಜೆಪಿ ನಾಯಕರನ್ನು ಭೇಟಿಯಾದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಬಿಜೆಪಿ-ಜೆಜೆಪಿ ಸರ್ಕಾರ ರಚನೆಯಾಗಲಿದೆ ಎಂಬ ಬಗ್ಗೆ ಘೋಷಣೆ ಮಾಡಿದ್ದರು.
“ಹರಿಯಾಣದ ಜನಾದೇಶವನ್ನು ಅಂಗೀಕರಿಸಿ, ಉಭಯ ಪಕ್ಷಗಳ ನಾಯಕರುಗಳು ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಒಟ್ಟಾಗಿ ಸರ್ಕಾರ ರಚಿಸಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಿಜೆಪಿಯವರಾಗಲಿದ್ದಾರೆ ಮತ್ತು ಉಪಮುಖ್ಯಮಂತ್ರಿ ಜೆಜೆಪಿಯವರಾಗಲಿದ್ದಾರೆ” ಎಂದು ಶಾ ಘೋಷಿಸಿದ್ದಾರೆ.
90 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆದ್ದುಕೊಂಡಿದೆ, ಜೆಜೆಪಿ ಲ ಚುನಾವಣೆಯಲ್ಲಿ 10 ಸ್ಥಾನಗಳನ್ನು ಗಳಿಸಿದೆ. ಈ ರಾಜ್ಯದಲ್ಲಿ 31 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಹರಿಯಾಣ ಲೋಕ ಹಿತ ಪಕ್ಷದ ಗೋಪಾಲ್ ಕಾಂಡ ಸೇರಿದಂತೆ ಎಂಟು ಸ್ಥಾನಗಳು ಸ್ವತಂತ್ರರ ಪಾಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.