ನವದೆಹಲಿ: ನಗದು ರಹಿತ ಆರ್ಥಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಮಹತ್ವದ ಯಶಸ್ಸು ಸಿಕ್ಕಿದೆ. ಡಿಜಿಟಲ್ ಪಾವತಿ ವೇದಿಕೆ UPI(United Payments Interface)ಯಲ್ಲಿ ಅಕ್ಟೋಬರ್ ತಿಂಗಳಲ್ಲಿ ವಹಿವಾಟು 100 ಕೋಟಿ ರೂ. ದಾಟಿದೆ.
ಈಗಾಗಲೇ UPI ಯು 10 ಕೋಟಿ ಬಳಕೆದಾರರನ್ನು ಹೊಂದುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಈ ಮೂಲಕ ಭಾರತವನ್ನು ನಗದು ರಹಿತ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಮಹತ್ವದ ಉತ್ತೇಜನ ಸಿಕ್ಕಿದೆ.
ಜಗತ್ತಿನ ಎಲ್ಲಾ ಪಾವತಿ ವ್ಯವಸ್ಥೆಗಳಿಗಿಂತಲೂ ಕ್ಷಿಪ್ರಗತಿಯಲ್ಲಿ ಪಸರಿಸುತ್ತಿರುವ ಪಾವತಿ ವ್ಯವಸ್ಥೆ ಎಂಬ ಹೆಗ್ಗಳಿಕೆಗೂ UPI ಪಾತ್ರವಾಗಿದೆ.
UPI ಅನ್ನು ಮೂರು ವರ್ಷಗಳ ಹಿಂದೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ನಿರ್ಮಾಣ ಮಾಡಿದ್ದು, ತಂತ್ರಜ್ಞಾನ ಆಧಾರಿತ ನಗದು ರಹಿತ ಪಾವತಿ ವ್ಯವಸ್ಥೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.