ನವದೆಹಲಿ: ದೀಪಾವಳಿ ಶುಭಾಶಯಗಳನ್ನು ತಿಳಿಸಿದ ಹಲವಾರು ವಿಶ್ವ ನಾಯಕರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಬೋರಿಸ್ ಜಾನ್ಸನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮುಂತಾದ ಅನೇಕ ಗಣ್ಯರುಗಳು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮತ್ತು ಭಾರತೀಯರಿಗೆ ಶುಭಾಶಯಗಳನ್ನು ಕೋರಿದ್ದರು.
ಬೋರಿಸ್ ಜಾನ್ಸನ್ ಅವರ ಶುಭಾಶಯದ ಟ್ವಿಟ್ಗೆ ಪ್ರತಿಕ್ರಿಯೆ ನೀಡಿರುವ ಮೋದಿ, “ಬೋರಿಸ್ ಜಾನ್ಸನ್ ಅವರು ದೀಪಾವಳಿಯ ತತ್ವವನ್ನು ಮನೋಜ್ಞವಾಗಿ ವಿವರಿಸಿದ್ದಾರೆ. ದೀಪಾವಳಿ ಎಲ್ಲರನ್ನೂ ಒಂದುಗೂಡಿಸುತ್ತದೆ ಎಂಬ ಅವರ ಮಾತನ್ನು ನಾನು ಒಪ್ಪುತ್ತೇನೆ. ಬ್ರಿಟನ್ನಲ್ಲಿನ ಭಾರತೀಯ ಸಮುದಾಯದ ಕೊಡುಗೆಗಳನ್ನು ವಿವರಿಸಿದ ಅವರಿಗೆ ಧನ್ಯವಾದಗಳು. ಈ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅವರು ಸಮೋಸ ಮತ್ತು ಸಿಹಿತಿನಿಸುಗಳನ್ನು ಆಸ್ವಾದಿಸಿದ್ದಾರೆ ಎಂದು ನಂಬುತ್ತೇನೆ” ಎಂದಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೂ ಮೋದಿ ಧನ್ಯವಾದಗಳನ್ನು ಅರ್ಪಿಸಿದರು. ಕೆನಡಾ ಅಧ್ಯಕ್ಷ ಜಸ್ಟಿನ್ ಟ್ರುಡಾವೊ ಶುಭಾಶಯಗಳಿಗೂ ಮೋದಿ ಪ್ರತಿಕ್ರಿಯಿಸಿ, ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ
ಭಾರತದಲ್ಲಿ ಭಾನುವಾರದಿಂದ ದೀಪಾವಳಿ ಸಂಭ್ರಮ ಮನೆಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.