ನವದೆಹಲಿ: ಸುಪ್ರೀಂಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಶರದ್ ಅರವಿಂದ್ ಬೊಬ್ಡೆ ಅವರು ನೇಮಕವಾಗಿದ್ದಾರೆ. ಈ ಬಗೆಗಿನ ವಾರೆಂಟ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು ಸಹಿ ಹಾಕಿದ್ದಾರೆ.
ದೇಶದ ಮುಖ್ಯ ನ್ಯಾಯಮೂರ್ತಿಗಳಾಗಿ ಬೊಬ್ಡೆ ಅವರು ನವೆಂಬರ್ 18 ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರು ಬೊಬ್ಡೆ ಅವರ ಹೆಸರನ್ನು ನಾಮನಿರ್ದೇಶನಗೊಳಿಸಿದ್ದರು. ಹಿರಿತನದಲ್ಲಿ ಗೋಗಯ್ ಅವರಿಗಿಂತ ನಂತರದ ಸ್ಥಾನದಲ್ಲಿ ಬೊಬ್ಬೆ ಅವರಿದ್ದಾರೆ. ಹೀಗಾಗಿ ಅವರ ಹೆಸರನ್ನು ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಲಾಗಿತ್ತು.
2000ನೇ ಇಸವಿಯಿಂದ ಬೊಬ್ಡೆ ಅವರು ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದಾರೆ.
ಬಾಂಬೆ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿದರು. 2013ರಲ್ಲಿ ಸುಪ್ರೀಂಕೋರ್ಟ್ಗೆ ನೇಮಕವಾದರು.
ಹಾಲಿ ಮುಖ್ಯ ನ್ಯಾಯಮೂರ್ತಿಗಳಾಗಿರುವ ಗೋಗಯ್ ಅವರ ಅವಧಿ ನವೆಂಬರ್ 17ರಂದು ಕೊನೆಗೊಳ್ಳಲಿದೆ. ಜಸ್ಟಿಸ್ ಬೊಬ್ಡೆ ಅವರು 2021 ಎಪ್ರಿಲ್ 23ರವರೆಗೆ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.