ನವದೆಹಲಿ: 2014-15ನೇ ಹಣಕಾಸು ವರ್ಷದಿಂದ ಪ್ರತಿ ವರ್ಷ ಕಾರ್ಪೊರೇಟ್ ವಲಯ ತನ್ನ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಯ ಭಾಗವಾಗಿ ರೂ. 10 ಸಾವಿರ ಕೋಟಿಗಳ ಕೊಡುಗೆಯನ್ನು ನೀಡುತ್ತಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದಾರೆ.
2013-14 ರಲ್ಲಿ ಕಂಪನೀಸ್ ಆ್ಯಕ್ಟ್ಗೆ ತಿದ್ದುಪಡಿಯನ್ನು ತಂದು, ನಿರ್ದಿಷ್ಟ ಆದಾಯವನ್ನು ಗಳಿಸುವ ಕಂಪನಿಗಳಿಗೆ ತನ್ನ ಆದಾಯದ ಶೇ. 2 ರಷ್ಟನ್ನು ಸಾಮಾಜಿಕ ಕಾರ್ಯಕ್ಕೆ ವಿನಿಯೋಗಿಸುವುದನ್ನು ಕಡ್ಡಾಯಗೊಳಿಸಲಾಯಿತು ಎಂದು ಅವರು ಹೇಳಿದ್ದಾರೆ.
ಮೊದಲ CSR (Corporate Social Responsibility) ಪ್ರಶಸ್ತಿಯನ್ನು ಪ್ರದಾನಿಸಿ ಅವರು ಮಾತನಾಡಿದರು. ಈ ಪ್ರಶಸ್ತಿಯನ್ನು ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯವು ನೀಡುತ್ತದೆ.
ಕಳೆದ 5 ವರ್ಷದಲ್ಲಿ ಕಾರ್ಪೊರೇಟ್ ವಲಯ ರೂ. 50,000 ಕೋಟಿಗಳನ್ನು ಸಾಮಾಜಿಕ ಕಾರ್ಯಕ್ಕಾಗಿ ಕೊಡುಗೆ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ರಾಜ್ಯ ಖಾತೆ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಬಡತನ ನಿರ್ಮೂಲನೆ, ಶುದ್ಧ ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮುಂತಾದ ಕಾರ್ಯಗಳಿಗೆ ಕಾರ್ಪೊರೇಟ್ ವಲಯ ಹೆಚ್ಚಿನ ಕೊಡುಗೆಗಳನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.