ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಜನತಾ ದಳ ಮೈತ್ರಿ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಈಗಾಗಲೇ ಜನರ ಓಲೈಕೆಗೆ ಮುಂದಾಗಿರುವ ಜನತಾದಳ ಮೈತ್ರಿಯ ಮುಖ್ಯಮಂತ್ರಿ ಅಭ್ಯರ್ಥಿ ನಿತೀಶ್ ಕುಮಾರ್ ಅವರು, ತಾನು ಮತ್ತೊಂದು ಬಾರಿಗೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವುದಾಗಿ ವಾಗ್ದಾನವಿತ್ತಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಮಹಿಳೆಯರಿಗಾಗಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ನಿತೀಶ್ ಈ ಭರವಸೆ ನೀಡಿದ್ದಾರೆ. ಅಲ್ಲಿ ನೆರೆದಿದ್ದ ಮಹಿಳೆಯರು ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಅವರು ಈ ಭರವಸೆ ನೀಡಿದ್ದಾರೆ.
ಕೇವಲ ಮಹಿಳೆಯರನ್ನು ಓಲೈಸಲು ನಿತೀಶ್ ಈ ಭರವಸೆ ನಿಡಿದ್ದಾರೋ ಅಥವಾ ನಿಜವಾಗಿಯೂ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧ ಮಾಡುತ್ತಾರೋ ಎಂಬುದು ಮುಂದಿನ ದಿನಗಳಲ್ಲಿ ತಿಳಿದು ಬರಲಿದೆ. ಅಲ್ಲದೇ ಮದ್ಯ ನಿಷೇಧಿಸುವ ಅವರ ವಾಗ್ದಾನ ಚುನಾವಣೆಯಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂಬುದೂ ತಿಳಿದು ಬರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.