ಬೆಂಗಳೂರು: ಟಿಪ್ಪು ಸುಲ್ತಾನ್ ಹೆಸರನ್ನು ಶಾಲಾ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. “ಟಿಪ್ಪು ಜಯಂತಿ ಆಚರಣೆಯನ್ನು ನಾವು ಈಗಾಗಲೇ ರದ್ದುಗೊಳಿಸಿದ್ದೇವೆ. ಇದೀಗ ಪಠ್ಯಪುಸ್ತಕಗಳಲ್ಲಿ ಇರುವ ಟಿಪ್ಪು ಸುಲ್ತಾನನ ಬಗೆಗಿನ ಎಲ್ಲಾ ಪಠ್ಯವನ್ನು ಕೈಬಿಡಲು ನಿರ್ಧರಿಸಿದ್ದೇವೆ. ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ” ಎಂದು ಯಡಿಯೂರಪ್ಪ ಹೇಳಿದ್ದಾರೆ.
“ಟಿಪ್ಪು ಜನ್ಮದಿನವನ್ನು ನವೆಂಬರ್ 10 ರಂದು ರಾಜ್ಯ ಸಮಾರಂಭವಾಗಿ ಆಚರಿಸದಿರಲು ನಾವು ಈಗಾಗಲೇ ನಿರ್ಧರಿಸಿದ್ದೇವೆ, ಆತ ವಿವಾದಾತ್ಮಕ ರಾಜನಾಗಿದ್ದ ಮತ್ತು ಬಲವಂತದ ಮತಾಂತರ, ದೇವಾಲಯಗಳ ನಾಶ ಮತ್ತು ಹಿಂದೂಗಳ ದೌರ್ಜನ್ಯ ಕಾರ್ಯದಲ್ಲಿ ತೊಡಗಿದ್ದ” ಎಂದು ಹೇಳಿದ್ದಾರೆ.
ಟಿಪು ಸುಲ್ತಾನನ ಉಲ್ಲೇಖಗಳನ್ನು ಇತಿಹಾಸ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಅವರ ಪ್ರಸ್ತಾವನೆಯ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಕ್ಟೋಬರ್ 28 ರಂದು ಕರ್ನಾಟಕ ಪಠ್ಯಪುಸ್ತಕ ಸೊಸೈಟಿಯ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಟಿಪ್ಪು ಸುಲ್ತಾನ ಜಯಂತಿ ಆಚರಣೆಯನ್ನು ಆರಂಭಿಸಿತ್ತು. ಇದು ಹಲವು ವಾದ ವಿವಾದಗಳ ಸೃಷ್ಟಿಗೆ ಕಾರಣವಾಗಿತ್ತು. ಹಿಂಸಾಚಾರಕ್ಕೂ ಎಡೆ ಮಾಡಿಕೊಟ್ಟಿತ್ತು. ಪ್ರಸ್ತು ಆಡಳಿತದಲ್ಲಿರುವ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿತು. ಇದೀಗ ಪಠ್ಯದಿಂದಲೂ ಟಿಪ್ಪುವಿನ ಉಲ್ಲೇಖವನ್ನು ಅಳಿಸಿ ಹಾಕಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.