ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತ ಮಟ್ಟಕ್ಕೆ ಏರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನಲೆಯಲ್ಲಿ ನವೆಂಬರ್ 1 ರಿಂದ ಅಲ್ಲಿನ ಮಕ್ಕಳಿಗೆ ಉಚಿತವಾಗಿ 50 ಲಕ್ಷ ಎನ್ 95 ಆ್ಯಂಟಿ ಪೊಲ್ಯುಷನ್ ಮಾಸ್ಕ್ (ಮಾಲಿನ್ಯ ತಡೆ ಮುಖವಾಡ) ಗಳನ್ನು ವಿತರಿಸಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, “ನವೆಂಬರ್ 1 ರಿಂದ ದೆಹಲಿಯ ಪ್ರತಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ 50 ಲಕ್ಷ N95 ಆ್ಯಂಟಿ ಪೊಲ್ಯೂಷನ್ ಮಾಸ್ಕ್ಗಳನ್ನು ಉಚಿತವಾಗಿ ಹಂಚಲಿದ್ದೇವೆ. ಸುಮಾರು 16 ಲಕ್ಷ ಮಕ್ಕಳಿಗೆ ಮಾಸ್ಕ್ ಸಿಗಲಿದೆ. ಒಂದು ಮಗುವಿಗೆ ಎರಡು ಮಾಸ್ಕ್ ನೀಡುತ್ತೇವೆ” ಎಂದಿದ್ದಾರೆ.
ಅಲ್ಲದೇ, ದೆಹಲಿಯ ವಾಯುಮಾಲಿನ್ಯದ ವಿರುದ್ಧ ಹೋರಾಡಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸುತ್ತದೆ ಎಂದು ಅವರು ಭರವಸೆಯನ್ನು ನೀಡಿದ್ದಾರೆ.
ಅಲ್ಲದೇ, ಕೃಷಿ ತ್ಯಾಜ್ಯವನ್ನು ಸುಡುವುದರ ವಿರುದ್ಧ ಪಂಜಾಬ್, ಹರಿಯಾಣ ಮತ್ತು ಉತ್ತರಪ್ರದೇಶ ಸರ್ಕಾರಗಳು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕೃಷಿ ತ್ಯಾಜ್ಯ ಸುಡುವಿಕೆಯೂ ದೆಹಲಿಯ ವಾಯು ಮಾಲಿನ್ಯಕ್ಕೆ ಹೆಚ್ಚಿನ ರೀತಿಯಲ್ಲಿ ಕೊಡುಗೆ ನೀಡುತ್ತಿದೆ. ಈಗಾಗಲೇ ದೆಹಿಯ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ಇಳಿದಿದೆ.
मैं दिल्लीवासियों के तरफ से हरियाणा, पंजाब और उत्तर प्रदेश सरकार से विनती करना चाहता हूँ कि वो अपने किसानों को सुविधाएं मुहैया कराए ताकि उनको फसलें जलाने की जरूरत न पड़े
दिल्ली के लोग और सरकार अपने तरफ से जो भी कर सकते हैं, हम कर रहे हैं। pic.twitter.com/Ip2a04mY0P
— Arvind Kejriwal (@ArvindKejriwal) ಅಕ್ಟೋಬರ್ 30, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.