ನವದೆಹಲಿ: ಅಸಿಯಾನ್, ಪೂರ್ವ ಏಷ್ಯಾ ಮತ್ತು ಆರ್ಸಿಇಪಿ ಶೃಂಗಸಭೆಗಳಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೂರು ದಿನಗಳ ಥಾಯ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದಾರೆ. ಮೊದಲ ದಿನ ಪ್ರಧಾನಮಂತ್ರಿಯವರು ಥಾಯ್ಲೆಂಡ್ನಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗುರುನಾನಕ್ ದೇವ್ ಅವರ 550 ನೇ ಜನ್ಮ ದಿನಾಚರಣೆಯ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಜೊತೆಗೆ ತಮಿಳಿನ ತಿರುಕ್ಕುರಲ್ನ ಥಾಯ್ ಭಾಷಾಂತರವನ್ನು ಬಿಡುಗಡೆ ಮಾಡಲಿದ್ದಾರೆ.
ನವೆಂಬರ್ 3 ರಂದು ಮೋದಿ ಅವರು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್-ಒ-ಚಾ ಅವರೊಂದಿಗೆ 16 ನೇ ಆಸಿಯಾನ್-ಭಾರತ ಶೃಂಗಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪ್ರಯುತ್ ಆಹ್ವಾನದ ಮೇರೆಗೆ ಮೋದಿ ಥಾಯ್ಲೆಂಡ್ ದೇಶಕ್ಕೆ ಪ್ರಯಾಣಿಸುತ್ತಿದ್ದಾರೆ.
“ಅಸಿಯಾನ್ ಸಂಬಂಧಿತ ಶೃಂಗಸಭೆಗಳು ನಮ್ಮ ರಾಜತಾಂತ್ರಿಕ ಸಂಬಂಧದ ಅವಿಭಾಜ್ಯ ಅಂಗವಾಗಿದೆ. ಇದು ಪ್ರಧಾನಿ ಮೋದಿಯವರ ಏಳನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು ಆರನೇ ಪೂರ್ವ ಏಷ್ಯಾ ಶೃಂಗಸಭೆಯಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪೂರ್ವ) ವಿಜಯ್ ಠಾಕೂರ್ ಸಿಂಗ್ ಹೇಳಿದ್ದಾರೆ.
“ಕಳೆದ ವರ್ಷ ಜನವರಿಯಲ್ಲಿ, ಭಾರತವು ಏಷ್ಯಾದ 25 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಶೃಂಗಸಭೆಯನ್ನು ಆಯೋಜಿಸಿದ್ದನ್ನು ನೀವು ನೆನಪಿಸಿಕೊಳ್ಳುತ್ತೀರಿ, ಇದರಲ್ಲಿ ಎಲ್ಲಾ 10 ಆಸಿಯಾನ್ ನಾಯಕರು ಭಾಗವಹಿಸಿದ್ದರು. ಇಲ್ಲಿ ದೆಹಲಿ ಘೋಷಣೆಯನ್ನು ಅಂಗೀಕರಿಸಲಾಯಿತು ಮತ್ತು ಆಸಿಯಾನ್-ಭಾರತ ಕಾರ್ಯತಂತ್ರದ ಸಹಭಾಗಿತ್ವ ಅನ್ನು ಇನ್ನಷ್ಟು ಬಲಪಡಿಸಲು ಮತ್ತು ಆಳಗೊಳಿಸಲು ಸಮ್ಮತಿಸಲಾಯಿತು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.