ನವದೆಹಲಿ: ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ಹಣಕಾಸು ವರ್ಷ 2021 ರ ಅಂತ್ಯದ ವೇಳೆಗೆ 750 ಮಿಲಿಯನ್ ಟನ್ ಕಲ್ಲಿದ್ದಲನ್ನು ಉತ್ಪಾದಿಸಲಿದೆ ಮತ್ತು ಹಣಕಾಸು ವರ್ಷ 2024 ರ ವೇಳೆಗೆ ಒಂದು ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದಿಸುವ ಗುರಿ ಹೊಂದಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಸಿಐಎಲ್ ಪ್ರಸ್ತುತ ಸುಮಾರು 660 ಮಿಲಿಯನ್ ಟನ್ ಕಲ್ಲಿದ್ದಲನ್ನು ಉತ್ಪಾದಿಸುತ್ತಿದೆ, ಇದು ದೇಶದ ಕಲ್ಲಿದ್ದಲು ಉತ್ಪಾದನೆಯ ಶೇಕಡಾ 82 ರಷ್ಟಾಗಿದೆ.
ಕೋಲ್ಕತ್ತಾದ ಸಿಐಎಲ್ನ 45 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಜೋಶಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಯು ಸುಮಾರು ಹತ್ತು ಸಾವಿರ ಹೊಸ ಉದ್ಯೋಗಗಳನ್ನು ಆಫರ್ ಮಾಡಲಿದೆ, ಈ ಮೂಲಕ ಈ ವಲಯದಲ್ಲಿ ಉದ್ಯೋಗಕ್ಕೆ ಉತ್ತೇಜನ ನೀಡಲಿದೆ ಎಂದಿದ್ದಾರೆ.
“ಕೋಲ್ ಇಂಡಿಯಾವು ತನ್ನ ಕಾರ್ಯಾಚರಣೆಗಳಲ್ಲಿ ತಂತ್ರಜ್ಞಾನಗಳ ಬಳಕೆ ಸೇರಿದಂತೆ ತನ್ನ ಕಾರ್ಯಗಳು ಮತ್ತು ವಿಸ್ತರಣಾ ಕಾರ್ಯಕ್ರಮಗಳಿಗಾಗಿ ಬೃಹತ್ ಬಂಡವಾಳ ಹೂಡಿಕೆಗೆ ಯೋಜಿಸಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಕಂಪನಿಯು ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಿದೆ ಮತ್ತು ನಿಗದಿತ ಎಲ್ಲಾ ಗುರಿಗಳನ್ನು ಸಮಯಕ್ಕೆ ಸರಿಯಾಗಿ ಸಾಧಿಸುತ್ತದೆ ಎಂದು ನಾನು ಭಾವಿಸುತ್ತೇನೆ ”ಎಂದು ಸಚಿವರು ಹೇಳಿದ್ದಾರೆ.
ಕಲ್ಲಿದ್ದಲು ವಲಯದಲ್ಲಿ ಸ್ವಯಂಚಾಲಿತ ಮಾರ್ಗದಲ್ಲಿ ಶೇಕಡಾ 100 ರಷ್ಟು ಎಫ್ಡಿಐಗೆ ಅನುವು ಮಾಡಿಕೊಟ್ಟ ಕೇಂದ್ರದ ನಿರ್ಧಾರವನ್ನು ಉಲ್ಲೇಖಿಸಿದ ಜೋಶಿ, “ವಿದ್ಯುತ್ ಬೇಡಿಕೆ ತೀವ್ರವಾಗಿ ಏರುತ್ತಿರುವುದರಿಂದ, ಪರಸ್ಪರರ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರದಂತೆ ಸರ್ಕಾರಿ ಮತ್ತು ಖಾಸಗಿ ವಲಯಗಳಿಗೆ ಕಲ್ಲಿದ್ದಲು ಉತ್ಪಾದಿಸಲು ಸಾಕಷ್ಟು ಅವಕಾಶವಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.