ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಘಟಕ ಮತ್ತು ಮಹಿಳಾ ಸಹಾಯ ಘಟಕಗಳನ್ನು ರಚನೆ ಮಾಡಲು ನಿರ್ಭಯಾ ನಿಧಿಯನ್ನು ವಿನಿಯೋಗಿಸಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಈ ಉಪಕ್ರಮವು ಮಹಿಳೆಯರ ಸುರಕ್ಷತೆಯನ್ನು ಬಲಪಡಿಸುತ್ತದೆ ಮತ್ತು ಮಹಿಳೆಯರಲ್ಲಿ ಹೆಚ್ಚಿನ ಸುರಕ್ಷತೆಯ ಭಾವವನ್ನು ಮೂಡಿಸುತ್ತದೆ ಎಂದು ಸ್ಮೃತಿ ಹೇಳಿದ್ದಾರೆ. ಅಲ್ಲದೇ, ಡಬ್ಲ್ಯುಸಿಡಿ ಸಚಿವಾಲಯದ ಶಿಫಾರಸುಗಳನ್ನು ಸ್ವೀಕರಿಸಿದ್ದಕ್ಕಾಗಿ ಇರಾನಿ ಗೃಹ ಸಚಿವಾಲಯಕ್ಕೆ ಧನ್ಯವಾದ ಅರ್ಪಿಸಿದರು.
“ನಮ್ಮ ಸಲಹೆಗೆ ಗೃಹ ಸಚಿವಾಲಯ ಶೀಘ್ರವಾಗಿ ಸ್ಪಂದಿಸಿರುವುದಕ್ಕೆ ಮಾತ್ರವಲ್ಲದೆ ಅಗತ್ಯವಾದ ಆಡಳಿತಾತ್ಮಕ ಕಾರ್ಯವಿಧಾನಗಳನ್ನು ತ್ವರಿತಗೊಳಿಸಲು ಸಹಕರಿಸಿದ್ದಕ್ಕಾಗಿ ನಾನು ಆಭಾರಿಯಾಗಿದ್ದೇನೆ” ಎಂದಿದ್ದಾರೆ.
“ಮಹಿಳಾ ಸಹಾಯ ಘಟಕಗಳನ್ನು ಸ್ಥಾಪನೆ ಮಾಡುವುದು ದೇಶಾದ್ಯಂತ ಮಹಿಳೆಯರ ಮತ್ತು ಪೋಷಕರ ಪ್ರಮುಖ ಬೇಡಿಕೆಯಾಗಿತ್ತು, ಅನೇಕ ಎನ್ಜಿಒಗಳು ಕೂಡ ಬಗ್ಗೆ ಮನವಿ ಮಾಡಿಕೊಂಡಿದ್ದವು. ಮಹಿಳೆಯರನ್ನು ಮತ್ತು ಮಕ್ಕಳನ್ನು ರಕ್ಷಿಸಲು ಸಹಾಯ ಮಾಡುವ ಸಾಂಸ್ಥಿಕ ಬೆಂಬಲವನ್ನು ಬಲಪಡಿಸಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ”ಎಂದು ಇರಾನಿ ಹೇಳಿದ್ದಾರೆ.
ಈ ಕ್ರಮವನ್ನು ರಾಷ್ಟ್ರೀಯ ಮಹಿಳಾ ಆಯೋಗ ಶ್ಲಾಘಿಸಿದೆ. “ಇದು ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಗೃಹ ಸಚಿವರಿಗೆ ಧನ್ಯವಾದಗಳು” ಎಂದು ಎನ್ಸಿಡಬ್ಲ್ಯೂ ಟ್ವೀಟ್ನಲ್ಲಿ ತಿಳಿಸಿದೆ.
ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ ಭೀತಿಯನ್ನು ತಡೆಯಲು ಪ್ರತಿ ಜಿಲ್ಲೆಯಲ್ಲೂ ಕಳ್ಳಸಾಗಣೆ ವಿರೋಧಿ ಘಟಕಗಳನ್ನು ಸ್ಥಾಪಿಸಬೇಕೆಂಬುದು ನಮ್ಮ ಬಹುದಿನಗಳ ಬೇಡಿಕೆಯಾಗಿತ್ತು ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.