ಉಫಾ: ಬ್ರಿಕ್ಸ್ ಶೃಂಗಸಭೆಯ ಸಲುವಾಗಿ ರಷ್ಯಾ ಭೇಟಿಯಲ್ಲಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ಥಾನ ಪ್ರಧಾನಿ ನವಾಝ್ ಶರೀಫ್ ಶುಕ್ರವಾರ ಪರಸ್ಪರ ಮಾತುಕತೆ ನಡೆಸಿದರು.
ಈ ವೇಳೆ 2016ರಲ್ಲಿ ಪಾಕಿಸ್ಥಾನದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ನವಾಝ್ ನೀಡಿರುವ ಆಹ್ವಾನವನ್ನು ಮೋದಿ ಸ್ವೀಕಾರ ಮಾಡಿದ್ದಾರೆ. ಉಭಯ ನಾಯಕರ ಭೇಟಿಯ ಬಳಿಕ ಉಭಯ ದೇಶಗಳ ವಿದೇಶಾಂಗ ಕಾರ್ಯದರ್ಶಿಗಳು ಜಂಟಿ ಪತ್ರಿಕಾ ಹೇಳಿಕೆ ಪ್ರಕಟಿಸಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ಭಯೋತ್ಪಾದನ ಸಮಸ್ಯೆಯನ್ನು ಹೊಡೆದೋಡಿಸುವುದು ಉಭಯ ದೇಶಗಳ ಸಾಮೂಹಿಕ ಜವಾಬ್ದಾರಿ ಎಂದು ಉಭಯ ನಾಯಕರು ಪ್ರತಿಪಾದಿಸಿದ್ದಾರೆ.
ಅಲ್ಲದೇ 2008ರ ಮುಂಬಯಿ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ಥಾನದಲ್ಲಿ ವಿಚಾರಣೆ ಎದುರಿಸುತ್ತಿರುವವರ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರಗಳನ್ನು ಪಾಕಿಸ್ಥಾನಕ್ಕೆ ನೀಡಲು ಭಾರತ ಒಪ್ಪಿದೆ ಮತ್ತು ವಿಚಾರಣೆಯನ್ನು ತ್ವರಿತಗೊಳಿಸುವಂತೆ ಸೂಚಿಸಿದೆ.
ಉಗ್ರರಲ್ಲಿ ಕೆಟ್ಟ ಉಗ್ರರು, ಒಳ್ಳೆಯ ಉಗ್ರರು ಎಂಬುದಿಲ್ಲ ಎಂಬ ಭಯೋತ್ಪಾದನೆಯ ಬಗೆಗಿನ ಭಾರತದ ನಿಲುವನ್ನು ಮೋದಿ ನವಾಝ್ ಅವರಿಗೆ ಮತ್ತೊಮ್ಮೆ ಸ್ಪಷ್ಟವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.