ಹರ್ಡೋಯ್: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಬರಲು ಇನ್ನು ಕೆಲವೇ ದಿನಗಳಿವೆ. ಈ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಉತ್ತರಪ್ರದೇಶದ ಡಿಜಿಪಿ ಓಪಿ ಸಿಂಗ್ ಅವರು, ತೀರ್ಪಿನ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಹೈ ಅಲರ್ಟ್ ಹಾಕಲಾಗಿದೆ, ಅಗತ್ಯಬಿದ್ದರೆ ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ನ್ಯಾಷನಲ್ ಸೆಕ್ಯೂರಿಟಿ ಆ್ಯಕ್ಟ್ (ಎನ್ಎಸ್ಎ) ಅನ್ನು ಕೂಡ ಅನುಷ್ಠಾನಗೊಳಿಸಲಾಗುವುದು ಎಂದಿದ್ದಾರೆ.
“ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ. ಯಾವುದೇ ಸಂದರ್ಭದಲ್ಲೂ ಯಾರಿಗೂ ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶವಿವನ್ನು ನಾವು ನೀಡುವುದಿಲ್ಲ. ನಮ್ಮ ಗುಪ್ತಚರ ವ್ಯವಸ್ಥೆಗಳನ್ನು ಸಂಪೂರ್ಣ ಸಜ್ಜುಗೊಳಿಸಲಾಗಿದೆ. ಅಗತ್ಯವಿದ್ದರೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಅಡ್ಡಿಪಡಿಸಲು ಪ್ರಯತ್ನಿಸುವ ಅಂಶಗಳನ್ನು ತಡೆಯಲು ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ವಿಧಿಸಲಾಗುವುದು” ಎಂದು ಸಿಂಗ್ ಹೇಳಿದ್ದಾರೆ.
ಅಯೋಧ್ಯೆ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಸುಪ್ರೀಂಕೋರ್ಟ್ನ ಐದು ನ್ಯಾಯಾಧೀಶರ ನ್ಯಾಯಪೀಠವು ವಿಚಾರಣೆ ನಡೆಸಿದೆ ಮತ್ತು ಅಕ್ಟೋಬರ್ 16 ರಂದು ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಗೋಗೊಯ್ ನಿವೃತ್ತಿಯಾಗುವ ಮೊದಲು ಅಂದರೆ ನವೆಂಬರ್ 17 ರ ಮೊದಲು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ 2.77 ಎಕರೆ ಜಮೀನಿನ ಮಾಲೀಕತ್ವದ ಕುರಿತು ತೀರ್ಪು ಹೊರ ಬರಲಿದೆ.
ತೀರ್ಪಿನ ಹಿನ್ನಲೆಯಲ್ಲಿ ಉತ್ತರಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ದೇಶದ ನಾಗರಿಕರಿಗೆ ಕರೆಯನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.