ಲಡಾಖ್: ತರಬೇತಿ ಪಡೆದ 164 ಮಂದಿಯನ್ನು ಲಡಾಖ್ ಸ್ಕೌಟ್ಸ್ ರೆಜಿಮೆಂಟ್ಗೆ ಸೈನಿಕರಾಗಿ ಸೇರ್ಪಡೆಗೊಳಿಸಲಾಗಿದೆ. ಶನಿವಾರ ಇವರ ಸೇರ್ಪಡೆಯ ಅಂಗವಾಗಿ ಲೇಹ್ನ ‘ಲಡಾಖ್ ಸ್ಕೌಟ್ಸ್ ರೆಜಿಮೆಂಟಲ್ ಸೆಂಟರ್’ನಲ್ಲಿ ಅಟೆಸ್ಟೇಷನ್ ಪೆರೇಡ್ ನಡೆಯಿತು.
ಅಕ್ಟೋಬರ್ 31 ರಂದು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎರಡು ಕೇಂದ್ರಾಡಳಿತ ಪ್ರದೇಶಗಳು ಔಪಚಾರಿಕವಾಗಿ ಅಸ್ತಿತ್ವಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಭಾರತ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರ ಪ್ರದೇಶಗಳನ್ನು ಒಳಗೊಂಡ ಭಾರತದ ಹೊಸ ನಕ್ಷೆಯನ್ನು ಬಿಡುಗಡೆ ಮಾಡಿದೆ. ಈ ನಕ್ಷೆಯು ಪಿಒಕೆ ಮತ್ತು ಗಿಲ್ಗಿಟ್-ಬಲ್ತಿಸ್ಥಾನ್ ಅನ್ನೂ ಒಳಗೊಂಡಿದೆ.
ರಾಧಾ ಕೃಷ್ಣ ಮಾಥುರ್ ಅವರು ಲಡಾಖ್ನ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರೆ, ಗುಜರಾತ್ ಕೇಡರ್ನ 1985 ಬ್ಯಾಚ್ನ ಭಾರತೀಯ ಆಡಳಿತ ಸೇವೆ (ಎಲ್ಎಎಸ್) ಅಧಿಕಾರಿ ಗಿರೀಶ್ ಚಂದ್ರ ಮುರ್ಮು ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ, ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ಹಿಂತೆಗೆದುಕೊಂಡಿತು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು. ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಹೊಂದಿರುವ ಮತ್ತು ಲಡಾಖ್ ಶಾಸಕಾಂಗವಿಲ್ಲದ ಕೇಂದ್ರಾಡಳಿತ ಪ್ರದೇಶವಾಗಿ ಅಸ್ತಿತ್ವಕ್ಕೆ ಬಂದಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.