ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದಿನಿಂದ ಮೂರು ದಿನಗಳ ರಷ್ಯಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಕ್ಷಣಾ ಸಹ-ಉತ್ಪಾದನೆಗೆ ಸಂಬಂಧಿಸಿದ ವಿಧಾನಗಳ ಬಗ್ಗೆ ರಷ್ಯಾದೊಂದಿಗೆ ಸಮಾಲೋಚನೆಯನ್ನು ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಂಗ್ ಅವರು ಮಂಗಳವಾರದಿಂದ ರಷ್ಯಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಭೇಟಿಯ ಸಮಯದಲ್ಲಿ, ಅವರು ಮಿಲಿಟರಿ ಮತ್ತು ಮಿಲಿಟರಿ ತಾಂತ್ರಿಕ ಸಹಕಾರ ಕುರಿತ 19 ನೇ ಭಾರತ-ರಷ್ಯಾ ಅಂತರ್ಸರ್ಕಾರಿ ಆಯೋಗದ (IRIGC-M&MTC) ಸಭೆಯ ಸಹ-ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ.
ರಕ್ಷಣಾ ಸಚಿವಾಲಯದ ಅಧಿಕಾರಿಗಳ ಪ್ರಕಾರ, ಸಿಂಗ್ ರಷ್ಯಾದ ರಕ್ಷಣಾ ಸಚಿವ ಜನರಲ್ ಸೆರ್ಗೆ ಶೋಯ್ಗು ಅವರೊಂದಿಗೆ ಮಿಲಿಟರಿಯಿಂದ ಮಿಲಿಟರಿ ಸಹಕಾರ ಮತ್ತು ರಕ್ಷಣಾ ಕೈಗಾರಿಕಾ ಸಹಕಾರದ ಎಲ್ಲ ಕ್ಷೇತ್ರಗಳನ್ನು ಒಳಗೊಂಡಂತೆ ವ್ಯಾಪಕ ಚರ್ಚೆ ನಡೆಸಲಿದ್ದಾರೆ. ರಷ್ಯಾದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಡೆನಿಸ್ ಮಾಂಟುರೊವ್ ಅವರೊಂದಿಗೆ ಭಾರತ-ರಷ್ಯಾ ರಕ್ಷಣಾ ಕೈಗಾರಿಕಾ ಸಹಕಾರ ಸಮ್ಮೇಳನವನ್ನು ಕೂಡ ಉದ್ಘಾಟಿಸಲಿದ್ದಾರೆ.
ಈ ಸಮ್ಮೇಳನದಲ್ಲಿ “ಮೇಕ್ ಇನ್ ಇಂಡಿಯಾ” ಕಾರ್ಯಕ್ರಮದಡಿ ಭಾರತ ಮತ್ತು ರಷ್ಯಾ ನಡುವಿನ ರಕ್ಷಣಾ ಕೈಗಾರಿಕಾ ಸಹಕಾರ, ತಂತ್ರಜ್ಞಾನ ವರ್ಗಾವಣೆ ಮತ್ತು ರಕ್ಷಣಾ ಉದ್ಯಮದಲ್ಲಿ ಭಾರತದಲ್ಲಿ ಹೂಡಿಕೆ ಮಾಡುವ ಮಾರ್ಗಗಳನ್ನು ಚರ್ಚಿಸಲಾಗುವುದು ಎಂದು ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.
ಮೂಲಗಳ ಪ್ರಕಾರ, ಬಿಡಿಭಾಗ ಮತ್ತು ಸಲಕರಣೆಗಳ ಉತ್ಪಾದನೆಯಲ್ಲಿ ಕಾರ್ಯತಂತ್ರದ ಸಹಭಾಗಿತ್ವದ ಮಾರ್ಗಗಳನ್ನು ಅನ್ವೇಷಿಸುವ ಸಲುವಾಗಿ ರಕ್ಷಣಾ ಉದ್ಯಮದ ನಾಯಕರ ನಿಯೋಗವು ಸಿಂಗ್ ಅವರೊಂದಿಗೆ ರಷ್ಯಾಕ್ಕೆ ತೆರಳುತ್ತಿದೆ. ಭೇಟಿಯ ಸಮಯದಲ್ಲಿ ಸಲಕರಣೆಗಳು ಅಥವಾ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಸಿಂಗ್ ರಷ್ಯಾದೊಂದಿಗೆ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.