ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಶೀಘ್ರದಲ್ಲೇ ಬೆಂಗಳೂರು- ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರ ಆರಂಭಿಸಲಿದೆ. ಈ ಬಗೆಗೆ ಗಂಭೀರ ಚಿಂತನೆ ನಡೆಯುತ್ತಿದೆ. ಬೆಂಗಳೂರು- ಹುಬ್ಬಳ್ಳಿ ನಡುವಣ ಸುಮಾರು 400 ಕಿ. ಮೀ. ದೂರವನ್ನು ಕ್ರಮಿಸಲು ಈ ರೈಲು 5 ಗಂಟೆಗಳನ್ನು ತೆಗೆದುಕೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು, “ಈ ಭಾಗದ ರೈಲು ಪ್ರಯಾಣಿಕರ ದೀರ್ಘಕಾಲದ ಬೇಡಿಕೆಯಂತೆ ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಓಡಿಸುವ ಕುರಿತು ಗಂಭೀರ ಚಿಂತನೆಗಳು ನಡೆಯುತ್ತಿದೆ. ಗಂಟೆಗೆ 130 ಕಿ. ಮೀ. ವೇಗದಲ್ಲಿ ಸಂಚಾರ ನಡೆಸುವ ರೈಲನ್ನು ಇಲ್ಲಿಗೆ ಹಾಕಲು ನಿರ್ಧರಿಸಿದ್ದೇವೆ. ಬೆಳಗಾವಿ-ಪುಣೆ ಮಾರ್ಗದಲ್ಲಿಯೂ ಇಂತಹ ರೈಲನ್ನು ಪರಿಚಯಿಸಲಾಗುತ್ತದೆ” ಎಂದಿದ್ದಾರೆ.
ಬೆಂಗಳೂರು-ಹುಬ್ಬಳ್ಳಿ ನಡುವಿನ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದೆ. ಇದೀಗ ರೈಲ್ವೆ ಇಲಾಖೆ ಈ ಬಗ್ಗೆ ಚಿಂತನೆಯನ್ನು ನಡೆಸುತ್ತಿರುವುದು ನಿಜಕ್ಕೂ ಸಕಾರಾತ್ಮಕ ಸುದ್ದಿಯಾಗಿದೆ.
ರಾಜ್ಯದಲ್ಲಿ ರೈಲು ಯೋಜನೆಗಳನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಶೀಘ್ರದಲ್ಲಿಯೇ ಬೆಂಗಳೂರು-ಹುಬ್ಬಳ್ಳಿ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸಂಚಾರವೂ ಆರಂಭವಾಗುವ ನಿರೀಕ್ಷೆ ಇದೆ. ಬೆಂಗಳೂರು-ಹುಬ್ಬಳ್ಳಿ ನಡುವೆ ಸೂಪರ್ ಫಾಸ್ಟ್ ರೈಲು ಆರಂಭವಾದರೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಯ ಜನರಿಗೆ ಸಾಕಷ್ಟು ಪ್ರಯೋಜನವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.