ದಿಸ್ಪುರ್: ಅಸ್ಸಾಂ ಅನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ರಾಜ್ಯ ಸರ್ಕಾರದ ದೃಷ್ಟಿಕೋನಕ್ಕೆ ಅನುಸಾರವಾಗಿ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನಾವಾಲ್ ಅವರು ಗುವಾಹಟಿಯಲ್ಲಿ ಅಸ್ಸಾಂ ರಾಜ್ಯ ಸಾರಿಗೆ ನಿಗಮದಡಿಯಲ್ಲಿ ಪರಿಚಯಿಸಲಾದ 15 ಎಲೆಕ್ಟ್ರಿಕ್ ಬಸ್ಸುಗಳನ್ನು ಅನಾವರಣಗೊಳಿಸಿದರು.
‘Faster Adoption and Manufacturing of Electric Vehicles’ (FAME-1) ಯೋಜನೆಯ ಅಡಿಯಲ್ಲಿ ಖರೀದಿಸಿದ ಮತ್ತು ಪ್ರಾಯೋಗಿಕವಾಗಿ ಪರಿಚಯಿಸಲಾದ ಹೊಸ ಬಸ್ಗಳು ಪನ್ಬಜಾರ್ನಿಂದ ಗುವಾಹಟಿಯ ಕಾಮಾಖ್ಯ ದೇವಸ್ಥಾನಕ್ಕೆ ಚಲಿಸಲಿವೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ, ಅಸ್ಸಾಂ ಅನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡಲು ಅಸ್ಸಾಂ ಸರ್ಕಾರ ಮುಂದಾಗಿದೆ” ಎಂದು ಸಿಎಂ ಸೋನಾವಾಲ ಈ ಸಂದರ್ಭದಲ್ಲಿ ಹೇಳಿದರು. ಈ ಪ್ರಾಯೋಗಿಕ ಯೋಜನೆಯು ಯಶಸ್ಸಿಯಾದರೆ ಸರ್ಕಾರವು ಹಂತಹಂತವಾಗಿ ರಾಜ್ಯದಾದ್ಯಂತ ಎಲೆಕ್ಟ್ರಿಕ್ ಬಸ್ ಸೇವೆಗಳನ್ನು ಪರಿಚಯಿಸುತ್ತದೆ ಎಂದು ಅವರು ಹೇಳಿದ್ದಾರೆ.
ಗುವಾಹಟಿಯನ್ನು ಆಗ್ನೇಯ ಏಷ್ಯಾ ದೇಶಗಳ ಹೆಬ್ಬಾಗಿಲಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದ ಅವರು, ಈ ರೀತಿಯ ದೃಷ್ಟಿಕೋನವು ಕಾರ್ಯರೂಪಕ್ಕೆ ಬರಲು ಸಮಾಜದ ಎಲ್ಲ ವರ್ಗದವರ ಹೆಚ್ಚಿನ ಬೆಂಬಲ ಬೇಕಾಗುತ್ತದೆ ಎಂದರು. ಎಲೆಕ್ಟ್ರಿಕ್ ವಾಹನಗಳ ಪರಿಚಯವು ಅಸ್ಸಾಂ ಅನ್ನು ಮಾಲಿನ್ಯ ಮುಕ್ತ ರಾಜ್ಯವನ್ನಾಗಿ ಮಾಡುವ ಸರ್ಕಾರದ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿನ ಒಂದು ಸಣ್ಣ ಹೆಜ್ಜೆಯಾಗಿದೆ ಮತ್ತು ಭವಿಷ್ಯದಲ್ಲಿ ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು FAME-2 ಅಡಿಯಲ್ಲಿ 100 ಹೆಚ್ಚುವರಿ ಎಲೆಕ್ಟ್ರಿಕ್ ಬಸ್ಸುಗಳನ್ನು ಪರಿಚಯಿಸುವ ಸಾಧ್ಯತೆಯಿದೆ, ಇದಕ್ಕಾಗಿ ಅಗತ್ಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ. ಈ ಬಸ್ಗಳಲ್ಲಿ 50 ಬಸ್ಗಳು ಗುವಾಹಟಿಯಲ್ಲಿ ಚಲಿಸಲಿದ್ದು, ತಲಾ 25 ಬಸ್ಗಳನ್ನು ಜೋರ್ಹತ್ ಮತ್ತು ಸಿಲ್ಚಾರ್ನಲ್ಲಿ ಸೇವೆಗೆ ನಿಯೋಜನೆಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.