ನವದೆಹಲಿ: ಕಾಂಗ್ರೆಸ್ ಪಕ್ಷದ ಮೊದಲ ಕುಟುಂಬವಾದ ಗಾಂಧಿ ಕುಟುಂಬಕ್ಕೆ ಇನ್ನು ಮುಂದೆ ಎಸ್ಪಿಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತೆಯನ್ನು ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿವೆ.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಅವರ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಈಗ Z ಡ್ ಪ್ಲಸ್ ವಿಭಾಗದ ರಕ್ಷಣೆ ಇರುತ್ತದೆ. ಎಸ್ಪಿಜಿ ಭದ್ರತೆ ಇರುವುದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇತ್ತೀಚೆಗೆ ನಡೆಸಲಾದ ಭದ್ರತಾ ಪರಿಶೀಲನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. 3,000 ಜನರ ಸಮರ್ಥ ಪಡೆಯನ್ನು ಹೊಂದಿರುವ ಎಸ್ಪಿಜಿ ಇನ್ನು ಮುಂದೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಾತ್ರ ರಕ್ಷಿಸುವ ಕೆಲಸವನ್ನು ಮಾಡಲಿದೆ.
ಎಸ್ ಪಿಜಿಯ ಭದ್ರತೆಗೆ ಗಾಂಧಿಗಳು ಸಮರ್ಪಕವಾಗಿ ಸ್ಪಂದಿಸದೇ ಇರುವ ಕಾರಣ ಮತ್ತು ಅದರ ಕಾರ್ಯಕ್ಕೆ ಅಡ್ಡಿಪಡಿಸುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇನ್ನು ಮುಂದೆ ಗಾಂಧಿಗಳಳಿಗೆ ಝಡ್ ಪ್ಲಸ್ ಭದ್ರತೆ ಇರಲಿದೆ, ಇದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸುಮಾರು ಸಿಬ್ಬಂದಿ ಕಾವಲು ಕಾಯುತ್ತಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.