ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಇಂಟೆಲಿಜೆನ್ಸ್ ಬ್ಯುರೋ ಮುಖ್ಯಸ್ಥ ಅರವಿಂದ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು. ಅಯೋಧ್ಯೆ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಪು ಪ್ರಕಟಿಸುತ್ತಿರುವ ಹಿನ್ನಲೆಯಲ್ಲಿ ಈ ಸಭೆಯನ್ನು ನಡೆಸಿದ್ದಾರೆ.
ದೇಶದ ಭದ್ರತೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಈ ಸಭೆಯನ್ನು ನಡೆಸಲಾಗುತ್ತದೆ. ತೀರ್ಪು ಪ್ರಕಟವಾದ ಬಳಿಕ ದೇಶದ ಯಾವುದೇ ಮೂಲೆಯಲ್ಲೂ ಅಹಿತಕರವಾದ ಘಟನೆಗಳು ನಡೆಯಬಾರದು ಎಂಬ ಕಾರಣಕ್ಕೆ ಹೆಚ್ಚಿನ ಮಟ್ಟದಲ್ಲಿ ಭದ್ರತೆ ಯೋಜನೆಗಳನ್ನು ರೂಪಿಸಲಾಗುತ್ತಿದೆ.
ತೀರ್ಪಿಗೂ ಮುಂಚಿತವಾಗಿ ರಾಷ್ಟ್ರ ರಾಜಧಾನಿಯಲ್ಲಿ ಮತ್ತು ದೇಶಾದ್ಯಂತದ ಅನೇಕ ರಾಜ್ಯಗಳಲ್ಲಿನ ಭದ್ರತಾ ವ್ಯವಸ್ಥೆಗಳನ್ನು ಗರಿಷ್ಠ ಮಟ್ಟಕ್ಕೆ ಏರಿಸಲಾಗಿದೆ. ಪಕ್ಷಾತೀತವಾಗಿ ಎಲ್ಲಾ ರಾಜಕಾರಣಿಗಳು ಮತ್ತು ವಿವಿಧ ಹಿಂದೂ, ಮುಸ್ಲಿಂ ಮತ್ತು ಇತರ ಸಾಮಾಜಿಕ ಸಂಘಟನೆಗಳು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳುವಂತೆ ಮತ್ತು ಸುಪ್ರೀಂಕೋರ್ಟ್ ತೀರ್ಪನ್ನು ಅಂಗೀಕರಿಸುವಂತೆ ಜನರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ..
ದಶಕಗಳಷ್ಟು ಹಳೆಯದಾದ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ತೀರ್ಪು ನೀಡುತ್ತಿರುವುದರಿಂದ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮಧ್ಯಪ್ರದೇಶ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ ಮತ್ತು ದೆಹಲಿಗಳಲ್ಲಿ ಮುಚ್ಚಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.