ಚೆನ್ನೈ: ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ. ಎನ್. ಶೇಷನ್ ಅವರು ಭಾನುವಾರ ರಾತ್ರಿ ತಮಿಳುನಾಡಿನ ಚೆನ್ನೈನಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. 87 ವಯಸ್ಸಿನ ಅವರಿಗೆ ಹೃದಯಸ್ತಂಭನವಾಯಿತು ಎಂದು ಮೂಲಗಳು ತಿಳಿಸಿವೆ.
ದೇಶದ 10 ನೇ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಅವರು, ಡಿಸೆಂಬರ್ 12, 1990 ರಿಂದ ಡಿಸೆಂಬರ್ 11, 1996ರವರೆಗೆ ಸೇವೆ ಸಲ್ಲಿಸಿದ್ದರು.
ಭಾರತದ ಮಾಜಿ ಮುಖ್ಯ ಚುನಾವಣಾ ಆಯುಕ್ತರಾಗಿ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ತರವಾದ ಸುಧಾರಣೆಗಳನ್ನು ತಂದಿದ್ದರು. ಕಟ್ಟುನಿಟ್ಟಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವಂತೆ ಮಾಡಿದ್ದೇ ಅವರು. ಅವರ ನಂತರ ಬಂದ ಎಲ್ಲಾ ಚುನಾವಣಾ ಆಯುಕ್ತರುಗಳಿಗೂ ಅವರು ಮಾರ್ಗದರ್ಶಕ ಶಕ್ತಿಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮಂದಿ ಗಣ್ಯರು ಶೇಷನ್ ಅವರ ಅಗಲುವಿಕೆಗೆ ಸಂತಾಪವನ್ನು ಸೂಚಿಸಿದ್ದಾರೆ.
“ಶ್ರೀ ಟಿ.ಎನ್.ಶೇಷನ್ ಅತ್ಯುತ್ತಮ ನಾಗರಿಕ ಸೇವಕರಾಗಿದ್ದರು. ಅವರು ಅತ್ಯಂತ ಶ್ರದ್ಧೆ ಮತ್ತು ಸಮಗ್ರತೆಯಿಂದ ಭಾರತಕ್ಕೆ ಸೇವೆ ಸಲ್ಲಿಸಿದರು. ಚುನಾವಣಾ ಸುಧಾರಣೆಗಳಿಗೆ ಸಂಬಂಧಿಸಿದಂತೆ ಅವರು ಮಾಡಿದ ಪ್ರಯತ್ನಗಳು ನಮ್ಮ ಪ್ರಜಾಪ್ರಭುತ್ವವನ್ನು ಬಲಗೊಳಿಸಿದೆ ಮತ್ತು ಹೆಚ್ಚು ಭಾಗಿದಾರನನ್ನಾಗಿ ಮಾಡಿದೆ. ಅವರ ಅಗಲುವಿಕೆ ನೋವು ತಂದಿದೆ. ಓಂ ಶಾಂತಿ” ಎಂದು ಮೋದಿ ಹೇಳಿದ್ದಾರೆ.
Shri TN Seshan was an outstanding civil servant. He served India with utmost diligence and integrity. His efforts towards electoral reforms have made our democracy stronger and more participative. Pained by his demise. Om Shanti.
— Narendra Modi (@narendramodi) November 10, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.