ನವದೆಹಲಿ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸಂಭವಿಸಿದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಭಾನುವಾರ ಮಧ್ಯಾಹ್ನ ಪ್ರಾರಂಭವಾದ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಸಂಜೆ ತನಕ ಮುಂದುವರೆಯಿತು. ಬಳಿಕ ಸೋಮವಾರ ಮುಂಜಾನೆ ಪುನರಾರಂಭವಾಯಿತು ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಕನಿಷ್ಠ ಎರಡರಿಂದ ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿದ್ದಾರೆಂದು ಹೇಳಲಾಗಿದೆ. ಅವರನ್ನು ಬಂಧಿಸಲು ಅಥವಾ ಹತ್ಯೆ ಮಾಡಲು ಯೋಧರು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.
ಭಾನುವಾರ ಮಧ್ಯಾಹ್ನ ಬಂಡಿಪೋರಾದ ಲಾಡೂರಾ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿತ್ತು. ಕೆಲವು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿಕೊಂಡಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯು ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಲಾಡೂರಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಗುಂಡಿನ ಚಕಮಕಿ ಆರಂಭವಾಗಿತ್ತು. ಉಗ್ರರ ಗುಂಡಿನ ದಾಳಿಗೆ ಪ್ರತ್ಯುತ್ತರ ನೀಡಿದ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಕೊಂದು ಹಾಕಿದವು.
ಕೆಲವು ವಾರಗಳ ಹಿಂದೆ, ಅವಂತಿಪೋರಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ನೆಲಕ್ಕುರುಳಿಸಲಾಗಿತ್ತು, ಇದರಲ್ಲಿ ಅಲ್ ಖೈದಾದ ಕಮಾಂಡರ್ ಅನ್ಸರ್ ಘಜ್ವತ್-ಉಲ್ ಹಿಂದ್ ಮತ್ತು ಝಾಕಿರ್ ಮೂಸಾನ ಉತ್ತರಾಧಿಕಾರಿ ಅಬ್ದುಲ್ ಹಮೀದ್ ಲೆಲ್ಹಾರಿ ಹತ್ಯೆಯಾಗಿದ್ದರು. ಭದ್ರತಾ ಪಡೆಗಳು ಝಾಕಿರ್ ಮೂಸಾನನ್ನು ಗುಂಡಿಕ್ಕಿ ಕೊಂದ ನಂತರ ಈ ವರ್ಷದ ಜೂನ್ನಲ್ಲಿ ಲೆಲ್ಹಾರಿ ಅನ್ನು ಘಜ್ವತ್-ಉಲ್-ಹಿಂದ್ನ ಹೊಸ ಕಮಾಂಡರ್ ಆಗಿ ಘೋಷಣೆ ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.