ನವದೆಹಲಿ: ನವೆಂಬರ್ 13 ಮತ್ತು 14 ರಂದು ನಡೆಯಲಿರುವ 11 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಬ್ರೆಝಿಲ್ಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲು ನಿರ್ಧರಿಸಿದ್ದಾರೆ.
ನರೇಂದ್ರ ಮೋದಿ ಅವರು ಬ್ರಿಕ್ಸ್ ವ್ಯವಹಾರ ವೇದಿಕೆ ಮತ್ತು ಸಮಗ್ರ ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ.
ಮುಚ್ಚಿದ ಅಧಿವೇಶನದಲ್ಲಿ ವಿಶ್ವ ನಾಯಕರು ವಿಶ್ವದ ರಾಷ್ಟ್ರೀಯ ಸಾರ್ವಭೌಮತ್ವವನ್ನು ಮುನ್ನಡೆಸುವಲ್ಲಿನ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಚರ್ಚಿಸಲಿದ್ದಾರೆ. ಸಭೆಯ ನಂತರ ಬ್ರಿಕ್ಸ್ ಸಮಗ್ರ ಅಧಿವೇಶನ ನಡೆಯಲಿದ್ದು, ಬ್ರಿಕ್ಸ್ ರಾಷ್ಟ್ರಗಳ ಆರ್ಥಿಕ ಅಭಿವೃದ್ಧಿಯ ಸಹಕಾರದ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ.
ಬ್ರಿಕ್ಸ್ ಬಿಸಿನೆಸ್ ಕೌನ್ಸಿಲ್ ಜೊತೆಗಿನ ಬ್ರಿಕ್ಸ್ ನಾಯಕರ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಈ ವೇಳೆ, ನ್ಯೂ ಡೆವಲಪ್ಮೆಂಟ್ ಬ್ಯಾಂಕ್ ಮತ್ತು ಬ್ರೆಜಿಲ್ ಬ್ರಿಕ್ಸ್ ಬಿಸಿನೆಸ್ ಕೌನ್ಸಿಲ್ ಅಧ್ಯಕ್ಷರು ತಮ್ಮ ವರದಿಗಳನ್ನು ನೀಡಲಿದ್ದಾರೆ.
ಈ ವೇಳೆ ಬ್ರಿಕ್ಸ್ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ ಮತ್ತು ಶೃಂಗಸಭೆಯು ಜಂಟಿ ಘೋಷಣೆಯೊಂದಿಗೆ ಸಮಾಪನಗೊಳ್ಳುತ್ತದೆ.
ಬ್ರಿಕ್ಸ್- ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ಅಭಿವೃದ್ಧಿಶೀಲ ರಾಷ್ಟ್ರಗಳ ಅಂತಾರಾಷ್ಟ್ರೀಯ ಸಂಸ್ಥೆಯಾಗಿದೆ. ಇದು ಒಟ್ಟಾಗಿ ವಿಶ್ವದ ಜನಸಂಖ್ಯೆಯ 42% ರಷ್ಟು ಭಾಗವನ್ನು ಹೊಂದಿದೆ ಮತ್ತು ಜಾಗತಿಕ ಜಿಡಿಪಿಯ 23%ರಷ್ಟು ಹೊಂದಿದೆ ಮತ್ತು ವಿಶ್ವ ವ್ಯಾಪಾರದ ಸುಮಾರು 17%ರಷ್ಟನ್ನು ನಿಯಂತ್ರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.