ನವದೆಹಲಿ: ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಗಳಿಗೂ ಸರ್ಕಾರ ರಚನೆ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜ್ಯಪಾಲ ಭಗತ್ ಸಿಂಗ್ ಕೋಶಯಾರಿ ಅವರು ರಾಷ್ಟ್ರಪತಿ ಆಡಳಿತವನ್ನು ಶಿಫಾರಸ್ಸು ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟು 288 ಸದಸ್ಯ ಬಲದ ವಿಧಾನಸಭೆ ಇದ್ದು, ಸರಳ ಬಹುಮತಕ್ಕೆ 145 ಸ್ಥಾನಗಳು ಬೇಕಾಗಿವೆ. ಬಿಜೆಪಿ ಏಕೈಕ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದರು ಕೂಡ ಸರ್ಕಾರ ರಚನೆ ಮಾಡುವಷ್ಟು ಸಂಖ್ಯಾ ಬಲ ಅದಕ್ಕೆ ಇಲ್ಲ. ಚುನಾವಣಾ ಪೂರ್ವದಲ್ಲಿ ಮೈತ್ರಿ ಮಾಡಿಕೊಂಡ ಶಿವಸೇನೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದು ಮೈತ್ರಿ ಕಡಿದುಕೊಂಡಿದೆ.
ಕಳೆದ ವಾರ ಮಹಾರಾಷ್ಟ್ರ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದರು. ಆದರೆ ಈ ಆಹ್ವಾನವನ್ನು ಬಿಜೆಪಿ ತಿರಸ್ಕರಿಸಿತ್ತು, ಬಳಿಕ ಶಿವಸೇನೆ ಆಹ್ವಾನವನ್ನು ಕಳುಹಿಸಲಾಗಿದೆ. ಇದಾದ ಬಳಿಕ ಶಿವಸೇನೆ ಕಾಂಗ್ರೆಸ್, ಎನ್ ಸಿಪಿ ಜೊತೆ ಸೇರಿ ಸರ್ಕಾರ ರಚನೆ ಮಾಡುವ ಕಸರತ್ತುಗಳನ್ನು ಮಾಡುತ್ತಿದೆ. ಆದರೆ ಸದ್ಯದ ಮಟ್ಟಿಗೆ ಅದು ಯಶಸ್ಸು ಆಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.
ಹೀಗಾಗಿ ರಾಷ್ಟ್ರಪತಿ ಆಳ್ವಿಕೆಯನ್ನು ವಿಧಿಸಲು ಶಿಫಾರಸ್ಸು ಮಾಡಲಾಗಿದೆ. ಆದರೆ ಕಾಂಗ್ರೆಸ್ ಮತ್ತು ಶಿವಸೇನೆ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ. ಒಂದು ರಾಷ್ಟ್ರಪತಿ ಆಡಳಿತ ವಿಧಿಸಿದರೆ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.