ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 11ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬುಧವಾರ ಬ್ರೆಝಿಲ್ಗೆ ಬಂದಿಳಿದಿದ್ದಾರೆ. ಡಿಜಿಟಲ್ ಆರ್ಥಿಕತೆ ಮತ್ತು ಭಯೋತ್ಪಾದನೆ ನಿಗ್ರಹದಂತಹ ಟಾಪ್ ಅಜೆಂಡಾವನ್ನು ಇಟ್ಟುಕೊಂಡು ಅವರು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಡಿಜಿಟಲ್ ಆರ್ಥಿಕತೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ವಿಶ್ವದ ಐದು ಪ್ರಮುಖ ಆರ್ಥಿಕತೆಗಳ ನಡುವಿನ ಸಂಬಂಧವನ್ನು ಬಲಪಡಿಸುವತ್ತ ಮತ್ತು ವಿಜ್ಞಾನ, ತಂತ್ರಜ್ಞಾನ, ಭಯೋತ್ಪಾದನೆ ನಿಗ್ರಹದ ಸಹಕಾರಕ್ಕಾಗಿ ಕಾರ್ಯವಿಧಾನಗಳನ್ನು ನಿರ್ಮಾಣ ಮಾಡುವತ್ತವೂ ಅವರು ಗಮನ ಹರಿಸಲಿದ್ದಾರೆ.
ಪ್ರಧಾನ ಮಂತ್ರಿವರು ಮಂಗಳವಾರ ಮಧ್ಯಾಹ್ನ ತಮ್ಮ ಅಧಿಕೃತ ನಿಯೋಗದೊಂದಿಗೆ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಝಿಲ್ಗೆ ತೆರಳಿದರು, ಈ ವರ್ಷ “ನವೀನ ಭವಿಷ್ಯಕ್ಕಾಗಿ ಆರ್ಥಿಕ ಬೆಳವಣಿಗೆ” ಎಂಬ ಥೀಮ್ನೊಂದಿಗೆ ಶೃಂಗಸಭೆಯನ್ನು ಆಯೋಜನೆಗೊಳಿಸಲಾಗಿದೆ. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೋದಿಯವರು ಭಾಗವಹಿಸುತ್ತಿರುವ ಆರನೇ ಬ್ರಿಕ್ಸ್ ಶೃಂಗಸಭೆ ಇದಾಗಿದೆ.
ಎಲ್ಲಾ ಐದು ದೇಶಗಳ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಉದ್ಯಮ ಸಮುದಾಯವನ್ನು ಪ್ರತಿನಿಧಿಸುವ ಬ್ರಿಕ್ಸ್ ಬಿಸಿನೆಸ್ ಫೋರಂನಲ್ಲಿ ಭಾರತದ ದೊಡ್ಡ ಉದ್ಯಮಿಗಳ ನಿಯೋಗವೂ ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿದೇಶಾಂಗ ಸಚಿವಾಲಯ ವ್ಯವಹಾರಗಳು ಪ್ರಕಟಣೆಯಲ್ಲಿ ತಿಳಿಸಿವೆ.
ಬ್ರೆಸಿಲಿಯಾಗೆ ಆಗಮಿಸಿದ ನಂತರ ಮೋದಿ ದಿನವಿಡೀ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ನಂತರ ಸಂಜೆ ಅವರು ಬ್ರಿಕ್ಸ್ ಬಿಸಿನೆಸ್ ಫೋರಂನ ಸಮಾರೋಪ ಸಮಾರಂಭದಲ್ಲಿ ಇತರ ಬ್ರಿಕ್ಸ್ ನಾಯಕರೊಂದಿಗೆ ಭಾಗವಹಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಬ್ರಿಕ್ಸ್ ಶೃಂಗಸಭೆಯು ಇತರ ಬ್ರಿಕ್ಸ್ ರಾಷ್ಟ್ರಗಳ ನಾಯಕರೊಂದಿಗೆ ಉಪಯುಕ್ತ ದ್ವಿಪಕ್ಷೀಯ ಸಂವಾದಗಳನ್ನು ನಡೆಸಲು ನನಗೆ ಅವಕಾಶವನ್ನು ಒದಗಿಸುತ್ತದೆ” ಎಂದು ಪ್ರಧಾನಿ ಬ್ರೆಝಿಲ್ಗೆ ತೆರಳುವ ಮೊದಲು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.