ರಾಂಚಿ: ಚುನಾವಣಾ ಪ್ರಕ್ರಿಯೆಯಲ್ಲಿ ಅಧಿಕ ಪ್ರಮಾಣದಲ್ಲಿ ಮತದಾರರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದೇ ಮೊದಲ ಬಾರಿಗೆ, ದಿವ್ಯಾಂಗ ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ. ಝಾರ್ಖಾಂಡ್ ವಿಧಾನಸಭೆಯಲ್ಲಿ ಈ ಸೌಲಭ್ಯವನ್ನು ಕಲ್ಪಿಸಿಕೊಡಲಾಗಿದೆ.
ಈ ಬಗೆಗಿನ ವಿವರಗಳನ್ನು ನೀಡಿದ ಮುಖ್ಯ ಚುನಾವಣಾ ಅಧಿಕಾರಿ ವಿನಯ್ ಕುಮಾರ್ ಚೌಬೆ ಅವರು, ಝಾರ್ಖಂಡ್ನ ಏಳು ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. ರಾಜಮಹಲ್, ಪಕೂರ್, ಜಮ್ತಾರಾ, ದಿಯೋಘರ್, ಗೊಡ್ಡಾ, ಬೊಕಾರೊ ಮತ್ತು ಧನ್ಬಾದ್ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೇವೆ ಇರಲಿದೆ.
2019ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಎಲ್ಲ ಕಾರ್ಯಕರ್ತರು ಒಬ್ಬನೇ ಒಬ್ಬ ಮತದಾರನೂ ಕೂಡ ಮತದಾನದಿಂದ ಹೊರಗುಳಿಯಬಾರದು ಎಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತದ ಸಂವಿಧಾನದ ಆದರ್ಶಗಳಿಗೆ ಗೌರವವನ್ನು ನೀಡುವ, ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದಲ್ಲಿ ಚುನಾವಣೆಯನ್ನು ನಡೆಸುವ ಉದ್ದೇಶವನ್ನು ಇದು ಇಟ್ಟುಕೊಂಡಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.
ದಿವ್ಯಾಂಗರಿಗೆ, ವಯಸ್ಕರಿಗೆ ಪೋಸ್ಟಲ್ ವೋಟಿಂಗ್ ವ್ಯವಸ್ಥೆಯನ್ನು ಕಲ್ಪಿಸಿರುವುದರ ಜೊತೆ ಜೊತೆಗೆ, ಮತಗಟ್ಟೆ ಬರುವ ದಿವ್ಯಾಂಗರಿಗೆ, ವಯಸ್ಕರಿಗೆ ಮೊದಲ ಆದ್ಯತೆಯನ್ನೂ ನೀಡಲಾಗುತ್ತಿದೆ. ದೃಷ್ಟಿ ವಿಕಲಚೇತನರಿಗೆ ಬ್ರೇಲ್ ಲಿಪಿಯಲ್ಲಿ ವೋಟರ್ ಚಿಪ್ ಅನ್ನು ಪೂರೈಕೆ ಮಾಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.