ತಿರುವನಂತಪುರಂ: ಪ್ರಸಿದ್ಧ ಶಬರಿಮಲೆ ದೇಗುಲದಲ್ಲಿ ನವೆಂಬರ್ 17 ರಿಂದ ಎರಡು ತಿಂಗಳ ಸುದೀರ್ಘ ಯಾತ್ರೆ ಪ್ರಾರಂಭವಾಗಲಿದೆ. ಈ ಹಿನ್ನಲೆಯಲ್ಲಿ ಅಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅನ್ನು ಹಾಕಲಾಗುತ್ತಿದೆ. ಕೇರಳ ಪೊಲೀಸ್ ಇಲಾಖೆಯು ಹಂತ ಹಂತವಾಗಿ 10,000 ಪೊಲೀಸ್ ಸಿಬ್ಬಂದಿಯನ್ನು ದೇಗುಲದ ಸುತ್ತ ನಿಯೋಜಿಸಲು ಸಜ್ಜಾಗಿದೆ ಎಂದು ವರದಿಗಳು ತಿಳಿಸಿವೆ.
ಮಂಡಲ ಮಕರವಿಳಕ್ಕು ಉತ್ಸವದ ಸಂದರ್ಭದಲ್ಲಿ ದೇವಾಲಯ ಆವರಣದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾರೂ ಅಡ್ಡಿಪಡಿಸುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಐದು ಹಂತಗಳಲ್ಲಿ ಒಟ್ಟು 10,000 ಪೊಲೀಸರನ್ನು ನಿಯೋಜಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
ಕಳೆದ ವರ್ಷ ಸುಪ್ರೀಂಕೋರ್ಟ್, ಋತುಚಕ್ರ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ಪ್ರವೇಶಕ್ಕೆ ಅನುಮತಿಯನ್ನು ನೀಡಿದ ಹಿನ್ನಲೆಯಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು, ಗದ್ದಲ ಸೃಷ್ಟಿಯಾಗಿತ್ತು. ಈ ಹಿನ್ನಲೆಯಲ್ಲಿ ಈ ಬಾರಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಕಳೆದ ವಾರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಕ್ತರಿಗೆ ತೊಂದರೆಯಾಗದಂತೆ ಕೈಗೊಂಡ ವ್ಯವಸ್ಥೆ ಮತ್ತು ಸುರಕ್ಷಿತ ತೀರ್ಥಯಾತ್ರೆಯ ಅನುಭವವನ್ನು ಖಚಿತಪಡಿಸಿಕೊಳ್ಳಲು ಪೊಲೀಸ್ ಆಡಳಿತ ಸೇರಿದಂತೆ ವಿವಿಧ ಇಲಾಖೆಗಳು ಕೈಗೊಂಡ ಸಿದ್ಧತೆಗಳನ್ನು ಪರಿಶೀಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.