ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಅತೀ ಮಹತ್ವದ ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದದ ಬಗ್ಗೆ ಅಪಪ್ರಚಾರ ಮಾಡಿ ದೇಶದ ದಾರಿ ತಪ್ಪಿಸಲು ಪ್ರಯತ್ನಿಸಿದ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧೀ ವಿರುದ್ಧ ಇಂದು ಬಿಜೆಪಿ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನೆಯನ್ನು ನಡೆಸುತ್ತಿದೆ.
ರಫೆಲ್ ಒಪ್ಪಂದದಲ್ಲಿ ಯಾವುದೇ ಅನುಮಾನವಿಲ್ಲ, ತನಿಖೆಗೆ ಅದನ್ನು ಒಳಪಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನಲೆಯಲ್ಲಿ ರಫೆಲ್ ಬಗ್ಗೆ ಅಪಪ್ರಚಾರ ಮಾಡಿದ ರಾಹುಲ್ ಗಾಂಧೀಯವರು ದೇಶದ ಕ್ಷಮೆಯಾಚನೆ ಮಾಡಬೇಕು ಎಂದು ಬಿಜೆಪಿ ಬೇಡಿಕೆ ಇಟ್ಟಿದೆ.
ನ್ಯಾಯಾಂಗದ ಆದೇಶಕ್ಕೆ ತಲೆ ಬಾಗಿ ರಾಹುಲ್ ಗಾಂಧೀಯವರು ದೇಶದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಬಿಜೆಪಿ ಇಂದು ದೇಶವ್ಯಾಪಿಯಾಗಿ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಕಛೇರಿಗಳ ಮುಂದೆ ಅಪಾರ ಪ್ರಮಾಣದಲ್ಲಿ ಜಮಾಯಿಸಿರುವ ಬಿಜೆಪಿ ಕಾರ್ಯಕರ್ತರು ದೊಡ್ಡ ಮಟ್ಟದಲ್ಲಿ ಘೋಷಣೆಗಳನ್ನು ಕೂಗುತ್ತಿದ್ದಾರೆ, ಅಲ್ಲಲ್ಲಿ ರಾಹುಲ್ ಅವರ ಪ್ರತಿರೂಪಗಳನ್ನು ಸುಡಲಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ವತಿಯಿಂದ ಪ್ರತಿಭಟನೆಗಳು ನಡೆಯುತ್ತಿವೆ.
2019ರ ಸಾರ್ವತ್ರಿಕ ಚುನಾವಣೆಯ ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷವು ರಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆಯನ್ನು ನಡೆಸಿತ್ತು, ಪ್ರಧಾನಿಯನ್ನೂ ಕಳ್ಳ ಎಂದು ಜರೆದಿತ್ತು. ಆದರೆ ಸುಪ್ರೀಂಕೋರ್ಟ್ ಆದೇಶವು ಅದರ ಎಲ್ಲಾ ಆರೋಪಗಳು ನಕಲಿ ಎಂಬುದನ್ನು ಸಾರಿ ಹೇಳಿದೆ. ಹೀಗಾಗಿ ರಾಹುಲ್ ದೇಶದ ಕ್ಷಮೆಯಾಚನೆ ಮಾಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.