ನವದೆಹಲಿ: ಸುಪ್ರೀಂಕೋರ್ಟ್ನ 47ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ಶರದ್ ಅರವಿಂದ್ ಬೋಬ್ಡೆ ಅವರು ಸೋಮವಾರ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಜಸ್ಟಿಸ್ ರಂಜನ್ ಗೋಗಯ್ ಅವರು ಭಾನುವಾರ ನಿವೃತ್ತರಾಗಿದ್ದಾರೆ.
ಬೋಬ್ಡೆ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಸ್ಟಿಸ್ ಬೋಬ್ಡೆ ಅವರು ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ 17 ತಿಂಗಳುಗಳ ಕಾಲ ಕರ್ತವ್ಯ ನಿರ್ವಹಿಸಲಿದ್ದಾರೆ ಮತ್ತು 2021ರ ಎಪ್ರಿಲ್ ತಿಂಗಳಿಗೆ ನಿವೃತ್ತರಾಗಲಿದ್ದಾರೆ.
ಬೋಬ್ಡೆ ಅವರು ತಮ್ಮ ವೃತ್ತಿಯಲ್ಲಿ ಹಲವು ಮಹತ್ವಪೂರ್ಣ ಪ್ರಕರಣಗಳ ಬಗ್ಗೆ ತೀರ್ಪು ನೀಡಿದ್ದಾರೆ. ಅಲ್ಲದೇ ಅಯೋಧ್ಯಾ ವಿವಾದದ ಬಗ್ಗೆ ಐತಿಹಾಸಿಕ ತೀರ್ಪನ್ನು ನೀಡಿದ್ದ ಐವರು ಸದಸ್ಯರ ಸಂವಿಧಾನಿಕ ಪೀಠದ ಸದಸ್ಯರೂ ಆಗಿದ್ದರು.
ಬೋಬ್ಡೆ ಅವರು ಮಧ್ಯಪ್ರದೇಶದ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ಅವರು ದೆಹಲಿ ವಿಶ್ವವಿದ್ಯಾಲಯ ಮತ್ತು ನಾಗ್ಪುರದ ಮಹಾರಾಷ್ಟ್ರ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.