ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಎಲ್ಲಾ ಅಭ್ಯರ್ಥಿಗಳು ಇಂದು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.
ಅಥಣಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್, ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ ಸೇರಿದಂತೆ ಬಿಜೆಪಿಯ ಎಲ್ಲಾ 15 ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಪಕ್ಷದ ಅಥಣಿ ಕ್ಷೇತ್ರದ ಅಭ್ಯರ್ಥಿ ಗಜಾನನ ಮಂಗಸೂಳಿ, ಬೆಳಗಾವಿ ಅಭ್ಯರ್ಥಿ ಲಖನ್ ಜಾರಕಿಹೊಳಿ ಸೇರಿದಂತೆ ಹಲವು ಕಾಂಗ್ರೆಸ್ ಅಭ್ಯರ್ಥಿಗಳೂ ಇಂದೇ ನಾಮಪತ್ರ ಸಲ್ಲಿಕೆ ಮಾಡಿದರು. ಜೆಡಿಎಸ್ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಅಭ್ಯರ್ಥಿಗಳು ಶಕ್ತಿ ಪ್ರದರ್ಶನವನ್ನೂ ಮಾಡಿದ್ದಾರೆ.
ನಾಮಪತ್ರ ವಾಪಾಸ್ ಪಡೆಯಲು ನ.21 ಕಡೆಯ ದಿನಾಂಕವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದೆ. ಡಿ.9ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಅಥಣಿ, ಕಾಗವಾಡ, ಚಿಕ್ಕಬಳ್ಳಾಪುರ, ಶಿವಾಜಿನಗರ, ಯೆಲ್ಲಾಪುರ, ಹೀರೇಕೆರೂರು, ವಿಜಯನಗರ, ರಾಣೆಬೆನ್ನೂರು, ಕೆ.ಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ, ಕೃಷ್ಣರಾಜಪೇಟೆ, ಹುಣಸೂರು, ಗೋಕಾಕ್ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.