ಪ್ರತಿವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತದೆ, ಜಾಗತಿಕ ಜನಸಂಖ್ಯಾ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇದನ್ನು ಆಚರಣೆ ಮಾಡಲಾಗುತ್ತದೆ.
1983ರಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ ಆಡಳಿತ ಸಮಿತಿ ವಿಶ್ವ ಜನಸಂಖ್ಯಾ ದಿನ ಆಚರಣೆಯನ್ನು ಜಾರಿಗೆ ತಂದಿತು.
ಪ್ರಸ್ತುತ ವಿಶ್ವ ಜನಸಂಖ್ಯೆ 7 ಬಿಲಿಯನ್ ಎಂದು ಅಂದಾಜಿಸಲಾಗಿದ್ದು, 2043ರ ವೇಳೆಗೆ 9 ಬಿಲಿಯನ್ ಮತ್ತು 2083ರ ವೇಳೆ 10 ಬಿಲಿಯನ್ ಆಗಬಹುದು ಎಂದು ಅಂದಾಜಿಸಲಾಗಿದೆ.
ಜನಸಂಖ್ಯೆ ಏರುತ್ತಿರುವಂತೆ ಅಪರಾಧ ಪ್ರಕರಣಗಳು, ಹವಮಾನ ವೈಪರೀತ್ಯಗಳು, ಆರ್ಥಿಕ ಸಮಸ್ಯೆಗಳು ಏರುತ್ತಾ ಸಾಗುತ್ತಿವೆ. ಹೆಚ್ಚುತ್ತಿರುವ ಮಾನವ ಚಟುವಟಿಕೆಗಳಿಂದ ಪ್ರಕೃತಿಯ ಮೇಲೆ ತೀವ್ರ ಹೊಡೆತ ಬೀಳುತ್ತಿದೆ. ಅಷ್ಟೇ ಅಲ್ಲದೇ ಆರೋಗ್ಯ, ಆರೋಗ್ಯಯುತ ತಾಯಿತನ, ಮಾನವ ಹಕ್ಕು, ತುರ್ತು ಪರಿಸ್ಥಿತಿಯಂತಹ ತೊಂದರೆಗಳೂ ಹೆಚ್ಚುತ್ತಿವೆ. ಇದೆಲ್ಲವುದರ ಬಗ್ಗೆ ಅರಿವು ಮೂಡಿಸುವ ಸಲುವಾಗಿಯೇ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತಿದೆ.
ಜಗತ್ತಿನಲ್ಲಿ ಎರಡನೇ ಅತಿದೊಡ್ಡ ಜನಸಂಖ್ಯೆಯನ್ನು ಹೊಂದಿರುವ ಭಾರತದಲ್ಲೂ ಈ ದಿನವನ್ನು ಆಚರಿಸಲಾಗುತ್ತಿದೆ. ಕೇಂದ್ರ ಸಚಿಪಿ ಜೆಪಿ ನಡ್ಡಾ ಅವರು ಇಂದು ಇಂಡಿಯಾ ಗೇಟ್ನಲ್ಲಿ ಮ್ಯಾರಾಥಾನ್ಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಶಾಲಾ ಕಾಲೇಜುಗಳ ಸಾವಿರಾರು ಯುವಕರು ಪಾಲ್ಗೊಳ್ಳಲಿದ್ದಾರೆ.
ಜನಸಂಖ್ಯಾ ಸ್ಫೋಟ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಜನಸಂಖ್ಯಾ ದಿನದ ಮುಖ್ಯ ಉದ್ದೇಶ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.