ನವದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.
ಎನ್ಆರ್ಸಿ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, “ಎನ್ಆರ್ಸಿಯನ್ನು ರಾಷ್ಟ್ರವ್ಯಾಪಿಯಾಗಿ ಅನುಷ್ಠಾನಕ್ಕೆ ತರಲಾಗುತ್ತದೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿರುತ್ತದೆ. ಈ ಬಗ್ಗೆ ಯಾವುದೇ ಧರ್ಮೀಯರೂ ಭಯಪಡುವ ಅಗತ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.
ಎನ್ಆರ್ಸಿಗೆ ಯಾವುದೇ ನಿಬಂಧನೆಗಳಿಲ್ಲ, ಎನ್ಆರ್ಸಿ ಅಡಿಯಲ್ಲಿ ಯಾವುದೇ ಧರ್ಮಗಳು ಬರುವುದಿಲ್ಲ. ಭಾರತದ ಎಲ್ಲ ನಾಗರಿಕರು, ಧರ್ಮವನ್ನು ಲೆಕ್ಕಿಸದೆ ಎನ್ಆರ್ಸಿ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಅಸ್ಸಾಂನಲ್ಲಿ ಎನ್ಆರ್ಸಿ ಅನುಷ್ಠಾನಕ್ಕೆ ಬಂದಿದೆ, ದೇಶವ್ಯಾಪಿಯಾಗಿ ಅನುಷ್ಠಾನಕ್ಕೆ ಬಂದ ಬಳಿಕ ಮತ್ತೊಮ್ಮೆ ಸಹಜವಾಗಿಯೇ ಅಸ್ಸಾಂನಲ್ಲೂ ಅನುಷ್ಠಾನವಾಗಲಿದೆ ಎಂದು ಅವರು ಹೇಳಿದ್ದಾರೆ.
ಎನ್ಆರ್ಸಿ ಪ್ರಕ್ರಿಯೆಯನ್ನು ಸುಪ್ರೀಂಕೋರ್ಟ್ ಮೇಲ್ವಿಚಾರಣೆ ಮಾಡುತ್ತದೆ. ಹೀಗಾಗಿ ಯಾವುದೇ ಭಯಪಡುವ ಅಗತ್ಯವಿಲ್ಲ. ಎನ್ಆರ್ಸಿ ಸಮಯದಲ್ಲಿ ಯಾವುದೇ ಧರ್ಮವನ್ನು ಗುರಿಯಾಗಿಸುವುದಿಲ್ಲ, ಯಾರನ್ನೂ ಪ್ರತ್ಯೇಕಿಸುವುದಿಲ್ಲ ಎಂದಿದ್ದಾರೆ.
ದೇಶದೊಳಗೆ ಅಕ್ರಮವಾಗಿ ನುಸುಳುತ್ತಿರುವ ಬಾಂಗ್ಲಾದೇಶಿಗರನ್ನು, ರೋಹಿಂಗ್ಯಾಗಳನ್ನು ಗುರುತಿಸಿ ಹೊರ ಹಾಕುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿಯಾಗಿ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಜಾರಿಗೆ ತರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.