ನವದೆಹಲಿ: ಭಾರತೀಯ ರಾಜತಾಂತ್ರಿಕ ವಿಕಾಸ್ ಸ್ವರೂಪ್ ಅವರು ಗುರುವಾರ ವಿದೇಶಾಂಗ ಸಚಿವಾಲಯದ ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.
“ಹೊಸ ಅಧ್ಯಾಯ ಪ್ರಾರಂಭವಾಗಿದೆ. ನವದೆಹಲಿಗೆ ಬಂದಿಳಿದು, ಕಾನ್ಸುಲರ್, ಪಾಸ್ಪೋರ್ಟ್, ವೀಸಾ ಮತ್ತು ಸಾಗರೋತ್ತರ ಭಾರತೀಯ ವ್ಯವಹಾರಗಳ ಕಾರ್ಯದರ್ಶಿಯಾಗಿ ಹೊಸ ಹುದ್ದೆಯ ಉಸ್ತುವಾರಿ ವಹಿಸಿಕೊಂಡಿದ್ದೇನೆ” ಎಂದು ಸ್ವರೂಪ್ ಟ್ವಿಟರ್ ಮೂಲಕ ತಿಳಿಸಿದ್ದಾರೆ.
A new chapter begins. Landed in New Delhi and assumed charge of my new position as Secretary (Consular, Passport, Visa & Overseas Indian Affairs). @SecretaryCPVOIA pic.twitter.com/PiShgwod4A
— Vikas Swarup (@VikasSwarup) November 21, 2019
ಈ ವರ್ಷ ಜುಲೈನಲ್ಲಿ ಸ್ವರೂಪ್ ಅವರನ್ನು ಎಂಇಎ ಹುದ್ದೆಗೆ ನೇಮಿಸಲಾಗಿತ್ತು.
ಈ ಹಿಂದೆ ಕೆನಡಾದಲ್ಲಿ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ 1986 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿ ಸ್ವರೂಪ್, ಪ್ರಸ್ತುತ ಹಿರಿಯ ರಾಜತಾಂತ್ರಿಕ ಸಂಜೀವ್ ಅರೋರಾ ಅವರ ಸ್ಥಾನಕ್ಕೆ ನೇಮಕಗೊಂಡಿದ್ದಾರೆ.
“2010ರ ಜನವರಿ 8ಕ್ಕೆ ಜಾರಿಗೆ ಬರುವಂತೆ ವಿದೇಶಾಂಗ ಸಚಿವಾಲಯದಲ್ಲಿ ವಿಕಾಸ್ ಸ್ವರೂಪ್ ಐಎಫ್ಎಸ್ (1986) ಅವರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ” ಎಂದು ಸಚಿವಾಲಯ ಅಧಿಕೃತ ಹೇಳಿಕೆ ನೀಡಿದೆ .
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.