ಕೋಲ್ಕತ್ತಾ: ಕೊಲ್ಕತ್ತಾದಲ್ಲಿ ಶುಕ್ರವಾರ ನಡೆಯಲಿರುವ ಭಾರತದ ಮೊದಲ ಹಗಲು ರಾತ್ರಿ ಪಿಂಕ್ ಬಾಲ್ ಟೆಸ್ಟ್ ಕ್ರಿಕೆಟ್ ಪಂದ್ಯದ ಆರಂಭಿಕ ದಿನದಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಸಾಕ್ಷಿಯಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಿಂಕ್-ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶವನ್ನು ಎದುರಿಸುತ್ತಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ಸ್ವರೂಪದ ಕ್ರಿಕೆಟ್ ಪಂದ್ಯಕ್ಕೆ ಅನುಮೋದನೆ ನೀಡಿದ ಏಳು ವರ್ಷಗಳ ನಂತರ ಭಾರತದಲ್ಲಿ ಗುಲಾಬಿ ಚೆಂಡು ಹಗಲು ರಾತ್ರಿ ಕ್ರಿಕೆಟ್ ಪಂದ್ಯ ಆಯೋಜನೆಗೊಳ್ಳುತ್ತಿದೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಕೋಲ್ಕತ್ತಾದಲ್ಲಿ ಪಿಂಕ್-ಬಾಲ್ ಟೆಸ್ಟ್ ಪಂದ್ಯದ ಆರಂಭಿಕ ದಿನವನ್ನು ವೀಕ್ಷಿಸಲಿದ್ದಾರೆ ಎಂಬುದನ್ನು ಬಾಂಗ್ಲಾ ಮೂಲಗಳು ಸ್ಪಷ್ಟಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಐತಿಹಾಸಿಕ ಪಂದ್ಯಕ್ಕೆ ಸಾಕ್ಷಿಯಾಗಲು ಹಸೀನಾ ಒಂದು ದಿನ ಕೋಲ್ಕತ್ತಾಗೆ ಭೇಟಿ ನೀಡಲಿದ್ದಾರೆ ಎಂದು ಭಾರತೀದ ವಿದೇಶಾಂಗ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
“ಭಾರತೀಯ ನೆಲದಲ್ಲಿ ಆಡಲಾಗುತ್ತಿರುವ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಐತಿಹಾಸಿಕ ಸ್ವರೂಪವನ್ನು ಗಮನದಲ್ಲಿಟ್ಟುಕೊಂಡು ಈ ಆಹ್ವಾನವನ್ನು ನೀಡಲಾಗಿದೆ” ಎಂದು ಕುಮಾರ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏಳು ವರ್ಷಗಳ ಹಿಂದೆ ಐಸಿಸಿ ಅನುಮೋದನೆ ನೀಡಿದ ನಂತರ, ಇಲ್ಲಿಯವರೆಗೆ ವಿವಿಧ ದೇಶಗಳಲ್ಲಿ 11 ಹಗಲು-ರಾತ್ರಿ ಟೆಸ್ಟ್ ಪಂದ್ಯಗಳನ್ನು ಆಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.