ಮುಂಬಯಿ: ಮಹಾರಾಷ್ಟ್ರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಉಪಮುಖ್ಯಮಂತ್ರಿಯಾಗಿ ಎನ್ಸಿಪಿ ಮುಖಂಡ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ದೇವೇಂದ್ರ ಫಡ್ನವಿಸ್ ಅವರು, “ರಾಜ್ಯದ ಜನರು ನಮಗೆ ಸ್ಪಷ್ಟ ಜನಾದೇಶವನ್ನು ನೀಡಿದ್ದರು. ಆದರೆ ಶಿವಸೇನೆಯು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾದ ಕಾರಣ ಅನಿವಾರ್ಯವಾಗಿ ರಾಜ್ಯಪಾಲ ಆಡಳಿತವನ್ನು ಹೇರಬೇಕಾಯಿತು. ಮಹಾರಾಷ್ಟ್ರಕ್ಕೆ ಬೇಕಾಗಿರುವುದು ಸ್ಥಿರ ಸರಕಾರವೇ ಹೊರತು ಕಿಚಡಿ ಸರಕಾರವಲ್ಲ” ಎಂದಿದ್ದಾರೆ.
ಶಿವಸೇನೆಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಡಿದುಕೊಂಡು, ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ಸರಕಾರ ರಚಿಸಲು ಹರಸಾಹಸ ಪಡುತ್ತಿದ್ದ ಸಂದರ್ಭದಲ್ಲೇ ಈ ಈ ಬೆಳವಣಿಗೆ ನಡೆದಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.