ಮುಂಬಯಿ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಅಜಿತ್ ಪವಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ನೂತನ ಮುಖ್ಯಮಂತ್ರಿಯಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರಿಗೆ ಅಭಿನಂದನೆಗಳು. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಇವರು ಅವಿರತ ಕಾರ್ಯ ಮಾಡಲಿದ್ದಾರೆ ಎಂಬ ಭರವಸೆ ಇದೆ” ಎಂದಿದ್ದಾರೆ.
Congratulations to @Dev_Fadnavis Ji and @AjitPawarSpeaks Ji on taking oath as the CM and Deputy CM of Maharashtra respectively. I am confident they will work diligently for the bright future of Maharashtra.
— Narendra Modi (@narendramodi) November 23, 2019
ಆಶ್ಚರ್ಯಕರ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಎರಡನೇ ಬಾರಿಗೆ ಪ್ರಮಾಣವಚನವನ್ನು ಸ್ವೀಕಾರ ಮಾಡಿದ್ದಾರೆ. ಎನ್ಸಿಪಿ ಪಕ್ಷದ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 288 ಸ್ಥಾನಗಳ ಬಗ್ಗೆ ಬಿಜೆಪಿಯು 105 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಶಿವಸೇನೆ 56 ಸ್ಥಾನಗಳನ್ನು ಮತ್ತು ಎನ್ಸಿಪಿ 54 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ಮೈತ್ರಿ ಪಕ್ಷ ಶಿವಸೇನೆಯು ಮೈತ್ರಿ ಕಡಿದುಕೊಂಡ ಕಾರಣದಿಂದಾಗಿ ಬಿಜೆಪಿ ಗೆ ಸರಕಾರ ರಚನೆ ಮಾಡುವುದು ತ್ರಾಸವಾಗಿತ್ತು.
ಆದರೀಗ ಎನ್ಸಿಪಿ ಬೆಂಬಲದೊಂದಿಗೆ ಬಿಜೆಪಿಯು ಸರಕಾರ ರಚನೆಯನ್ನು ಮಾಡಿ ಎಲ್ಲರಿಗೂ ಅಚ್ಚರಿ ಉಂಟುಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.