ಶ್ರೀನಗರ: ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಶುಕ್ರವಾರ ದುಷ್ಕರ್ಮಿಗಳು ಇಟ್ಟಿದ್ದ ಅಪಾಯಕಾರಿ ಐಇಡಿ ಬಾಂಬ್ ಅನ್ನು ಭಾರತೀಯ ಯೋಧರು ನಿಷ್ಕ್ರಿಯಗೊಳಿಸಿದ್ದಾರೆ.
ತಪಾಸಣೆಯ ಸಂದರ್ಭದಲ್ಲಿ ಯೋಧರು ಐಇಡಿ ಬಾಂಬ್ ಇರುವುದನ್ನು ಪತ್ತೆ ಹಚ್ಚಿದ್ದರು. ತಕ್ಷಣವೇ ಸ್ಥಳವನ್ನು ಸುತ್ತುವರೆದು ಮುಂಜಾಗ್ರತಾ ಕ್ರಮಗಳನ್ನು ವಹಿಸಿದರು. ಬಳಿಕ ಬಾಂಬ್ ನಿಷ್ಕ್ರಿಯ ದಳವನ್ನು ಸ್ಥಳಕ್ಕೆ ಕರೆಯಿಸಿ ನಿಷ್ಕ್ರಿಯಗೊಳಿಸಲಾಗಿದೆ. ಈ ಮೂಲಕ ನೂರಾರು ಮಂದಿಯ ಪ್ರಾಣವನ್ನು ಉಳಿಸಲಾಯಿತು.
ತಕ್ಷಣ ಕಾರ್ಯಪ್ರವೃತ್ತರಾಗಿ ಸಮಯಪ್ರಜ್ಞೆ ಮೆರೆದು ಬಾಂಬನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಯೋಧರ ದಿಟ್ಟತನವನ್ನು ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಶ್ಲಾಘಿಸಿದ್ದಾರೆ. “ಸರಿಯಾದ ಸಮಯದಲ್ಲಿ ಬಾಂಬನ್ನು ಪತ್ತೆಹಚ್ಚಿ ಅದನ್ನು ನಿಷ್ಕ್ರಿಯಗೊಳಿಸಿದ ಸೇನೆಯು ಅಭಿನಂದನೆಗೆ ಅರ್ಹವಾಗಿದೆ” ಎಂದಿದ್ದಾರೆ.
“ಕಳೆದ ಕೆಲವು ಸಮಯಗಳಿಂದ ಸೇನೆಯು ಅತ್ಯಂತ ನಿರ್ಣಾಯಕ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ, ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ. ಇದು ನಿಜಕ್ಕೂ ಶ್ಲಾಘನೀಯ ಕಾರ್ಯ” ಎಂದಿದ್ದಾರೆ. ಅಲ್ಲದೇ, ಜಮ್ಮು-ಕಾಶ್ಮೀರದಲ್ಲಿ ಇನ್ನುಮುಂದೆ ಶಾಂತಿ ಸ್ಥಾಪನೆಯಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.